ಪುಲ್ವಾಮ ಉಗ್ರದಾಳಿಗೆ ಕಾರಣವಾದ ಲೋಪದ ಬಗ್ಗೆ ದೇಶಕ್ಕೆ ತಿಳಿಯಲೆ ಇಲ್ಲ.! ಸತ್ಯಪಾಲ್ ಮಲ್ಲಿಕ್

ಹೊಸದಿಲ್ಲಿ: ‘The Wire’ ಸುದ್ದಿ ಸಂಸ್ಥೆಯ ಕರಣ್ ಥಾಪರ್ ಅವರಿಗೆ ಸಂದರ್ಶನ ನೀಡಿದ್ದ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್, ಪುಲ್ವಾಮಾ ದಾಳಿ ಸಂದರ್ಭದಲ್ಲಿನ ಲೋಪಗಳ ಕುರಿತು ಹಲವಾರು ವಿಷಯಗಳನ್ನು ಬಹಿರಂಗಗೊಳಿಸಿದ್ದರು. ಇದರ ಬೆನ್ನಿಗೇ NDTVಯ ಮಾಜಿ ಕಾರ್ಯನಿರ್ವಾಹಕ ಸಂಪಾದಕ ರವೀಶ್ ಕುಮಾರ್ ಅವರಿಗೆ ಸಂದರ್ಶನ ನೀಡಿರುವ ಅವರು, ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದು, ನಾನು ಈ ಲೋಪಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೆ ತಂದರೂ, ಅವರು ನನಗೆ ಮೌನವಾಗಿರುವಂತೆ ಸೂಚಿಸಿದ್ದರು ಎಂಬ ಸ್ಫೋಟಕ ವಿಷಯವನ್ನು ಬಹಿರಂಗಗೊಳಿಸಿದ್ದಾರೆ.

ಕರಣ್ ಥಾಪರ್ ಅವರೊಂದಿಗಿನ ತಮ್ಮ ಸಂದರ್ಶನವನ್ನು ಸಮರ್ಪಕವಾಗಿ ಪ್ರಸಾರ ಮಾಡುವಲ್ಲಿ ಮಾಧ್ಯಮ ಸಂಸ್ಥೆಗಳು ವಿಫಲವಾಗಿದ್ದು, ಕೆಲವೇ ಮಾಧ್ಯಮ ಸಂಸ್ಥೆಗಳು ಮಾತ್ರ ಅದನ್ನು ಬಿತ್ತರಿಸಿವೆ ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮಾತಿಗೆ ಪ್ರತಿಕ್ರಿಯಿಸಿರುವ ರವೀಶ್ ಕುಮಾರ್, ನಾನು ಆ ಸಂದರ್ಶನವನ್ನು ಪ್ರಸಾರ ಮಾಡಿದೆ ಹಾಗೂ ನಾನು ಅದರ ಕುರಿತು ನಿರ್ಲಕ್ಷ್ಯ ತೋರಲಿಲ್ಲ ಎಂಬುದನ್ನು ತೋರಿಸಲು ನಾನು ಸತ್ಯಪಾಲ್ ಮಲಿಕ್ ಅವರನ್ನು ಸಂದರ್ಶಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಪುಲ್ವಾಮಾ ದಾಳಿಯ ನಂತರ ಸಿಆರ್‌ಪಿಎಫ್ ಯೋಧರ ಸಾಗಣೆಗೆ ಐದು ವಿಮಾನಗಳಿಗೆ ಬೇಡಿಕೆ ಇಡಲಾಗಿತ್ತು. ಆದರೆ, ಗೃಹ ಸಚಿವಾಲಯವು ಅವನ್ನು ಒದಗಿಸಲಿಲ್ಲ. ಅಲ್ಲದೆ ಅಲ್ಲಿ ಇನ್ನೂ ಹಲವು ಲೋಪಗಳಾಗಿದ್ದು, ಶಿಷ್ಟಾಚಾರದ ಪ್ರಕಾರ, ಯೋಧರ ಕಣ್ಗಾವಲು ವಾಹನವು ಆಕಾಶದಲ್ಲಿ ಹಾರಾಟ ನಡೆಸುವ ಬದಲು ರಸ್ತೆ ಮಾರ್ಗವಾಗಿ ತೆರಳುತ್ತಿತ್ತು. ರಸ್ತೆ ಮಾರ್ಗವಾಗಿ ತೆರಳುವ ವಾಹನಗಳನ್ನು ತಪಾಸಣೆ ಮಾಡಲು ಯಾವುದೇ ಗಸ್ತು ವಾಹನಗಳಾಗಲಿ, ತಪಾಸಣಾ ಠಾಣೆಗಳಾಗಲಿ ಇರಲಿಲ್ಲ ಎಂದು ಸತ್ಯಪಾಲ್ ಮಲಿಕ್ ವಿವರಿಸಿದ್ದಾರೆ.

Related Posts

ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲ : ಗುಜರಾತ್ ಬಿಜೆಪಿ ಸರ್ಕಾರ 

ಆತ್ಮೀಯರೇ,  ಇದ್ದಕ್ಕಿದ್ದಂತೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅಪ್ಪಿಕೊಳ್ಳಲು ಹೊರಟಿರುವ ಸಂಘಿಗಳು ಏನೇ ನಾಟಕವಾಡಿದರೂ….  ಅವರ ಸಂವಿಧಾನ ದ್ವೇಷ ಮತ್ತು ಅಂಬೇಡ್ಕರ್ ದ್ವೇಷವನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ….   ಅದರ ಮತ್ತೊಂದು ಉದಾಹರಣೆ ಇಲ್ಲಿದೆ…   ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ…

ಲಂಚ ನೀಡಿ ಗುತ್ತಿಗೆ ಪಡೆದ ಆರೋಪ : ಅಮೆರಿಕದಲ್ಲಿ ಗೌತಮ್ ಅದಾನಿ ಅರೆಸ್ಟ್ ವಾರೆಂಟ್ ಜಾರಿ

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮತ್ತೊಮ್ಮೆ ಭಾರಿ ಮುಖಭಂಗ ಅನುಭವಿಸಿದ್ದಾರೆ. ಸೋಲಾರ್ ಒಪ್ಪಂದಗಳಿಗೆ ಶತಕೋಟಿ ಡಾಲರ್‌ಗಳನ್ನು ಲಂಚವಾಗಿ ಪಾವತಿಸಿದ ಮತ್ತು ಅಂತರರಾಷ್ಟ್ರೀಯ ಹೂಡಿಕೆದಾರರನ್ನು ದಾರಿ ತಪ್ಪಿಸಿದ ಆರೋಪದ ಮೇಲೆ ನ್ಯೂಯಾರ್ಕ್ ಫೆಡರಲ್ ಕೋರ್ಟ್ ಗೌತಮ್ ಅದಾನಿಯನ್ನು ದೋಷಿ ಎಂದು ತೀರ್ಪು…

Leave a Reply

Your email address will not be published. Required fields are marked *