BIG NEWS 2022ರಲ್ಲಿ ಭಾರತದಲ್ಲಿ ಬರೊಬ್ಬರಿ 2,044 ಸಾರ್ವಜನಿಕ ರಂಗದ ಬ್ಯಾಂಕ್‌ ಶಾಖೆಗಳು ಮುಚ್ವಲ್ಪಟ್ಟಿದೆ! ಎಷ್ಟು ಸಾವಿರ ಉದ್ಯೋಗ ನಷ್ಟವಾಗಿದೆ ಗೊತ್ತಾ?

ಚೆನ್ನೈ: ಭಾರತದ ಸಾರ್ವಜನಿಕ‌ ರಂಗದ ಬ್ಯಾಂಕುಗಳ 2,044 ಶಾಖೆಗಳನ್ನು ಮುಚ್ಚಲಾಗಿದ್ದು, 13 ಸಾವಿರ ಉದ್ಯೋಗಗಳನ್ನು ಕಡಿತಗೊಳಿಸಲಾಗಿದೆ ಎಂದು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ತಿಳಿಸಿದೆ.

2022ನೇ ಹಣಕಾಸು ವರ್ಷದಲ್ಲಿ ಈ ಬೆಳವಣಿಗೆ ನಡೆದಿದೆ. ಆದರೆ 2021 ಕ್ಕೆ ಹೋಲಿಸಿದರೆ 2022 ರಲ್ಲಿ ಖಾಸಗಿ ಬ್ಯಾಂಕ್‌ಗಳ ಶಾಖೆಗಳ ಸಂಖ್ಯೆ 4,023 ರಷ್ಟು ಏರಿಕೆಯಾಗಿದೆ.

2020ರಲ್ಲಿ ಸರ್ಕಾರಿ ಬ್ಯಾಂಕ್‌ಗಳ ವಿಲೀನ, ಶಾಖೆಗಳು ಮತ್ತು ಸಿಬ್ಬಂದಿ ಸಂಖ್ಯೆಯಲ್ಲಿ ಕಡಿತಕ್ಕೆ ಕಾರಣವಾಗಿದೆ ಎಂದು ಎಐಬಿಇಎ ಮಾಹಿತಿ ನೀಡಿದೆ.

ಹಣಕಾಸು ವರ್ಷ 2021 ರ ಅಂತ್ಯದ ವೇಳೆಗೆ ಖಾಸಗಿ ಬ್ಯಾಂಕುಗಳು 5,34,022 ಸಿಬ್ಬಂದಿ ಬಲ ಹೊಂದಿದ್ದವು. ಹಣಕಾಸು ವರ್ಷ 2022 ರಲ್ಲಿ, ಈ ಸಂಖ್ಯೆ 3,57,346 ಆಗಿದ್ದು, ಹಲವಾರು ಬ್ಯಾಂಕ್‌ಗಳು ತಮ್ಮ ಸಿಬ್ಬಂದಿಯ ಸಂಖ್ಯೆಯನ್ನು ವೆಬ್‌ಸೈಟ್‌ಗಳಲ್ಲಿ ನಮೂದಿಸಿಲ್ಲ‌ ಎಂದು ವರದಿಯಾಗಿದೆ.

Related Posts

ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲ : ಗುಜರಾತ್ ಬಿಜೆಪಿ ಸರ್ಕಾರ 

ಆತ್ಮೀಯರೇ,  ಇದ್ದಕ್ಕಿದ್ದಂತೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅಪ್ಪಿಕೊಳ್ಳಲು ಹೊರಟಿರುವ ಸಂಘಿಗಳು ಏನೇ ನಾಟಕವಾಡಿದರೂ….  ಅವರ ಸಂವಿಧಾನ ದ್ವೇಷ ಮತ್ತು ಅಂಬೇಡ್ಕರ್ ದ್ವೇಷವನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ….   ಅದರ ಮತ್ತೊಂದು ಉದಾಹರಣೆ ಇಲ್ಲಿದೆ…   ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ…

ಸಿಗರೇಟ್, ಪೆಪ್ಸಿ, ಕೋಕಾಕೋಲಾ ಬೆಲೆ ಶೇ. 35ಕ್ಕೆ ಏರಿಕೆ ಸಾಧ್ಯತೆ

ನವದೆಹಲಿ: ಜಿಎಸ್​ಟಿ ದರ ಪರಿಷ್ಕರಣೆ ನಿರ್ಧರಿಸಲು ರಚಿಸಲಾಗಿರುವ ಸಚಿವರ ಮಂಡಳಿಯು (ಜಿಒಎಂ) ತಂಬಾಕು ಇತ್ಯಾದಿ ದುಷ್ಕರ್ಮ ಸರಕುಗಳಿಗೆ ಸಿನ್ ಟ್ಯಾಕ್ಸ್ ಅನ್ನು ಶೇ. 28ರಿಂದ ಶೇ. 35ಕ್ಕೆ ಹೆಚ್ಚಿಸಲು ನಿರ್ಧರಿಸಿದೆ. ಇದರೊಂದಿಗೆ ದುಷ್ಕರ್ಮ ಸರಕುಗಳೆಂದು ಪರಿಗಣಿಸಲಾದ ಸಿಗರೇಟು ಇತ್ಯಾದಿ ತಂಬಾಕು ಉತ್ಪನ್ನಗಳು, ಪೆಪ್ಸಿ,…

Leave a Reply

Your email address will not be published. Required fields are marked *