ಪ್ರಧಾನಿಯವರ ‘ಮನ್ ಕಿ ಬಾತ್’ ನಲ್ಲಿ ಭಾಗವಹಿಸದ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಕಾಲೇಜು ಆಡಳಿತ ಮಂಡಳಿ!

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲವೆಂದು 36 ನರ್ಸಿಂಗ್ ವಿದ್ಯಾರ್ಥಿಗಳ ವಿರುದ್ಧ ಕಾಲೇಜು ಆಡಳಿತ ಮಂಡಳಿ ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ.

ಚಂಡೀಗಢದ PGIMER ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಎಜುಕೇಶನ್ ವಿದ್ಯಾರ್ಥಿಗಳ ವಿರುದ್ಧ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಮನ್ ಕಿ ಬಾತ್‌ನಲ್ಲಿ ಭಾಗವಹಿಸದ ವಿದ್ಯಾರ್ಥಿಗಳನ್ನು ಒಂದು ವಾರಗಳ ಕಾಲ ಹಾಸ್ಟೆಲ್‌ನಿಂದ ಹೊರಗೆ ಹೋಗುವುದನ್ನು ನಿಷೇಧಿಸಲಾಗಿದೆ.

ಮನ್ ಕಿ ಬಾತ್ ನ 100ನೇ ಸಂಚಿಕೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿರಲಿಲ್ಲ. PGIMER ನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಎಜುಕೇಶನ್ ಮೊದಲ ಮತ್ತು ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಹಾಜರಾಗಲು ಸೂಚನೆ ನೀಡಲಾಗಿತ್ತು. ಆದರೆ 36 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ.

ನಂತರ ಸಂಸ್ಥೆಯ ಪ್ರಿನ್ಸಿಪಲ್ ಡಾ. ಸುಖಪಾಲ್ ಕೌರ್ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಗೆ ಹೋಗದಂತೆ ನಿಷೇಧಿಸಿ ಪತ್ರವನ್ನು ಹೊರಡಿಸಿದ್ದಾರೆ. 28 ಪ್ರಥಮ ವರ್ಷದ ವಿದ್ಯಾರ್ಥಿಗಳು ಮತ್ತು ಎಂಟು ಮೂರನೇ ವರ್ಷದ ವಿದ್ಯಾರ್ಥಿಗಳಿಗೆ ನಿಷೇಧ ಹೇರಲಾಗಿದೆ.

ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿರುವ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ಸಮಜಾಯಿಷಿ ನೀಡಿದ್ದು, ಶಿಸ್ತು ಕಾಯ್ದುಕೊಳ್ಳುವ ಭಾಗವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ವಿದ್ಯಾರ್ಥಿಗಳು ಇಲಾಖೆ ಆಯೋಜಿಸುವ ವಿವಿಧ ಅತಿಥಿ ಉಪನ್ಯಾಸ ತರಗತಿಗಳಿಗೆ ಕಡ್ಡಾಯವಾಗಿ ಹಾಜರಾಗಬೇಕಾಗುತ್ತದೆ ಎಂದು ಹೇಳಿದೆ.

Related Posts

ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲ : ಗುಜರಾತ್ ಬಿಜೆಪಿ ಸರ್ಕಾರ 

ಆತ್ಮೀಯರೇ,  ಇದ್ದಕ್ಕಿದ್ದಂತೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅಪ್ಪಿಕೊಳ್ಳಲು ಹೊರಟಿರುವ ಸಂಘಿಗಳು ಏನೇ ನಾಟಕವಾಡಿದರೂ….  ಅವರ ಸಂವಿಧಾನ ದ್ವೇಷ ಮತ್ತು ಅಂಬೇಡ್ಕರ್ ದ್ವೇಷವನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ….   ಅದರ ಮತ್ತೊಂದು ಉದಾಹರಣೆ ಇಲ್ಲಿದೆ…   ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ…

ಲಂಚ ನೀಡಿ ಗುತ್ತಿಗೆ ಪಡೆದ ಆರೋಪ : ಅಮೆರಿಕದಲ್ಲಿ ಗೌತಮ್ ಅದಾನಿ ಅರೆಸ್ಟ್ ವಾರೆಂಟ್ ಜಾರಿ

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮತ್ತೊಮ್ಮೆ ಭಾರಿ ಮುಖಭಂಗ ಅನುಭವಿಸಿದ್ದಾರೆ. ಸೋಲಾರ್ ಒಪ್ಪಂದಗಳಿಗೆ ಶತಕೋಟಿ ಡಾಲರ್‌ಗಳನ್ನು ಲಂಚವಾಗಿ ಪಾವತಿಸಿದ ಮತ್ತು ಅಂತರರಾಷ್ಟ್ರೀಯ ಹೂಡಿಕೆದಾರರನ್ನು ದಾರಿ ತಪ್ಪಿಸಿದ ಆರೋಪದ ಮೇಲೆ ನ್ಯೂಯಾರ್ಕ್ ಫೆಡರಲ್ ಕೋರ್ಟ್ ಗೌತಮ್ ಅದಾನಿಯನ್ನು ದೋಷಿ ಎಂದು ತೀರ್ಪು…

Leave a Reply

Your email address will not be published. Required fields are marked *