ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದ್ದು ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರಕ್ಕೇರಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸ ಭೇಟಿ ನೀಡಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ರಾಜ್ಯದಲ್ಲಿ ಯಾವುದೇ ಗೊಂದಲವಿಲ್ಲದೆ ಶಾಂತಿಯುತವಾಗಿ ಮತದಾನ ಆಗಿದೆ.
ಮೋದಿ, ಬಿಜೆಪಿಯವರು ಗೊಂದಲಕ್ಕೊಳಗಾಗಿದ್ದಾರೆ. ಚುನಾವಣೋತ್ತರ ಸಮೀಕ್ಷೆ ವರದಿ ಸರಿಯಾಗಿದೆ ಎಂದು ಭಾವಿಸಿದ್ದೇನೆ. ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ, ಕನ್ನಡಿಗರೇ ನಮಗೆ ಕೇಂದ್ರಬಿಂದು ಎಂದು ಹೇಳಿದರು.
ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರಕ್ಕೇರಿದ ಬಳಿಕ ಮೊದಲು ಐದು ಭರವಸೆಗಳನ್ನು ಈಡೇರಿಸಲಿದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.