ಬೆಂಗಳೂರು: ಸಾರ್ವಜನಿಕ ಸನ್ಮಾನಗಳಲ್ಲಿ ಹಾರ-ಶಾಲು ಬೇಡ. ಪ್ರೀತಿಯಿಂದ ನೀಡುವುದಾದರೆ ಪುಸ್ತಕಗಳನ್ನು ನೀಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಭಾನುವಾರ ಸಿದ್ದರಾಮಯ್ಯ ಅವರು ತಮ್ಮ ಮುಖಪುಟದ ಖಾತೆಯಲ್ಲಿ, “ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯವಾಗಲಿದೆ” ಎಂದಿದ್ದಾರೆ.
” ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ.” ಎಂದು ಮನವಿ ಮಾಡಿಕೊಂಡಿದ್ದಾರೆ.