ಹಸಿದವರಿಗೆ ಮಾತ್ರ ಅನ್ನದ ಮಹತ್ವ ಗೊತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ “ಹಳ್ಳಿ ಮಕ್ಕಳನ್ನು ಐಎಎಸ್‌ಗಳಾಗಿ ಮಾಡಬೇಕು”

ಬೆಂಗಳೂರು: ‘ಹಸಿದವರಿಗೆ ಮಾತ್ರ ಊಟದ ಮಹತ್ವ ಗೊತ್ತಿರುತ್ತದೆ. ಹಸಿವಿನಿಂದ ನರಳುವವರಿಗೆ ನೆರವಾದರೆ ಮಾತ್ರ ಐಎಎಸ್, ಕೆಎಎಸ್ ನಲ್ಲಿ ಟಾಪರ್ಸ್ ಆಗಿರುವುದಕ್ಕೂ ಸಾರ್ಥಕತೆ ಬರುತ್ತದೆ. ಹೀಗಾಗಿ ಹಸಿವು ಗೊತ್ತಿರುವ ಹಳ್ಳಿ ಮಕ್ಕಳನ್ನು ಐಎಎಸ್ ಗಳಾಗಿ ಮಾಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

‘ಇನ್ ಸೈಟ್ ಐಎಎಸ್ ಅಕಾಡೆಮಿ’ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.

”ಸಮಾಜದಲ್ಲಿನ ಅಸಮಾನತೆ, ತಾರತಮ್ಯ ಅಳಿಸಲು ಯತ್ನಿಸದೇ ಹೋದರೆ ಈ ದೇಶದ ಜನರೇ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯದ ಸೌಧವನ್ನು ಧ್ವಂಸ ಮಾಡುತ್ತಾರೆ ಎನ್ನುವ ಎಚ್ಚರಿಕೆಯ ಮಾತನ್ನು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು. ಈ ಎಚ್ಚರಿಕೆಯ ಮಾತನ್ನು ನೆನಪಿನಲ್ಲಿ ಇಟ್ಟುಕೊಂಡು ಅಸಮಾನತೆ, ತಾರತಮ್ಯವನ್ನು ಅಳಿಸಬೇಕು” ಎಂದು ಅವರು ಕರೆ ನೀಡಿದರು.

”ಬಹುಸಂಖ್ಯಾತ ಸಮುದಾಯ ಅಕ್ಷರ ಕಲಿಕೆಯಿಂದ ವಂಚಿತವಾಗಿದೆ. ಇದಕ್ಕೆ ಸಮಾಜದಲ್ಲಿರುವ ಅಸಮಾನತೆ ಕಾರಣ. ಈ ಅಸಮಾನತೆಯನ್ನು ಅಳಿಸಲು ಸಾಧ್ಯವಾಗದಿದ್ದರೆ, ಆ ದಿಕ್ಕಿನಲ್ಲಿ ಶ್ರಮಿಸದಿದ್ದರೆ ನಾವು ಜನಪ್ರತಿನಿಧಿಗಳಾಗಿ, ಐಎಎಸ್-ಕೆಎಎಸ್ ಅಧಿಕಾರಿಗಳಾಗಿ ಏನು ಪ್ರಯೋಜನ?” ಎಂದು ಪ್ರಶ್ನೆ ಮಾಡಿದರು.

ಕಾರ್ಯಕ್ರಮದಲ್ಲಿ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್, ಇನ್ ಸೈಟ್ ಸಂಸ್ಥೆಯ ನಿರ್ದೇಶಕರಾದ ವಿನಯ್ ಕುಮಾರ್ ಹಾಗೂ ಮಧುಕರ್ ನಾಗಣ್ಣ ಅವರು ಉಪಸ್ಥಿತರಿದ್ದರು.

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

Leave a Reply

Your email address will not be published. Required fields are marked *