ಶಾಲಾ ಮಕ್ಕಳಿಗೆ ವಾರಕೊಮ್ಮೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡುವಂತೆ ಸುತ್ತೋಲೆ ಹೊರಡಿಸಿದ ಸರ್ಕಾರ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದರಿಂದ ಎಂಟನೆ ತರಗತಿಯ ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಮೊಟ್ಟೆಯನ್ನು ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ಜೂ.20ರಿಂದ ಜು.15ರವೆರೆಗೆ ಅಥವಾ ಮುಂದಿನ ಆದೇಶದವರೆಗೆ ವಿತರಿಸುವಂತೆ ಸರಕಾರವು ಶಾಲಾ ಮುಖ್ಯಶಿಕ್ಷಕರಿಗೆ ತಿಳಿಸಿದೆ.

ಈ ಕುರಿತು ರಾಜ್ಯ ಸರಕಾರವು ಸುತ್ತೋಲೆಯನ್ನು ಹೊರಡಿಸಿದ್ದು, 2023-24ನೆ ಸಾಲಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಒಂದರಿಂದ ಎಂಟನೆ ತರಗತಿಯ ಮಕ್ಕಳಿಗೆ ರಕ್ತಹೀನತೆ ನಿವಾರಣೆಗಾಗಿ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ, ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರದಲ್ಲಿ ಒಂದು ದಿನ ನೀಡುವಂತೆ ತಿಳಿಸಲಾಗಿದೆ. ಮೊಟ್ಟೆಯೊಂದಕ್ಕೆ 6 ರೂ.ಗಳನ್ನು ನಿಗಧಿಪಡಿಸಿದೆ.

ಕಲ್ಯಾಣ ಕರ್ನಾಟಕ ವಿಭಾಗದ 8 ಜಿಲ್ಲೆಗಳಾದ ಯಾದಗಿರಿ, ಕಲಬುರಗಿ, ಬಳ್ಳಾರಿ, ವಿಜಯಪುರ, ಕೊಪ್ಪಳ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಅನುದಾನದಲ್ಲಿ ಮಕ್ಕಳಿಗೆ ವಾರಕ್ಕೊಮ್ಮೆ ಮೊಟ್ಟೆಯನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಟಾನ ಮಾಡುವಂತೆ ಸೂಚಿಸಲಾಗಿದೆ.

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

Leave a Reply

Your email address will not be published. Required fields are marked *