ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ಮರ್ಯಾದಾ ಹತ್ಯೆ ಮಾಡಿದ ತಂದೆ:ವಿಷಯ ತಿಳಿದು ರೈಲಿಗೆ ತಲೆಕೊಟ್ಟ ಪ್ರೇಮಿ

ಕೋಲಾರ: ದಲಿತ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಹತ್ಯೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. 

  ಪ್ರೀತಿಸಿದ ಯವತಿಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ಯುವಕ ತಾನೂ ರೈಲಿಗೆ ತಲೆ ಕೊಟ್ಟು ಅತ್ಮಹತ್ಯೆ ಮಾಡಿಕೊಂಡಿರುವ ಮನ ಕಲಕುವ ಘಟನೆ ನಡೆದಿದೆ.

  ಬೋಡಗುರ್ಕಿ ಗ್ರಾಮದ ಪರಿಶಿಷ್ಟ ಜಾತಿಯ ಗಂಗಾಧರ (23) ಮತ್ತು ಗೊಲ್ಲ ಸಮುದಾಯದ ಕೀರ್ತಿ (20) ಪರಸ್ಪರ ಪ್ರೀತಿಸುತ್ತಿದ್ದರು. ಇದನ್ನು ತಿಳಿದ ಕೀರ್ತಿಯ ತಂದೆ ಕೃಷ್ಣಮೂರ್ತಿ ಮಂಗಳವಾರ ಬೆಳಗ್ಗೆ ತಮ್ಮ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ವಿಷಯ ಕೇಳಿದ ಯುವಕ ಮೈಸೂರು-ಚೆನ್ನೈ, ಎಕ್ಸ್‌ಪ್ರೆಸ್‌ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

  ಕೆಜಿಎಫ್‌ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿದ್ದ ಕೀರ್ತಿ ಮತ್ತು ಯುವಕ ಗಂಗಾಧರ ಇಬ್ಬರ ಮನೆಗಳು ಒಂದೇ ಕಡೆ ಇವೆ. ದ್ವಿತೀಯ ಪಿಯುಸಿ ಅನುತ್ತೀರ್ಣನಾಗಿದ್ದ ಗಂಗಾದಧರ ಗಾರೆ ಕೆಲಸ ಮಾಡುತ್ತಿದ್ದನು. ಇವರಿಬ್ಬರೂ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಪ್ರೀತಿಯ ವಿಚಾರವನ್ನು ಗಂಗಾಧರ ಕೀರ್ತಿಯ ತಂದೆ ಕೃಷ್ಣಮೂರ್ತಿಗೆ ತಿಳಿಸಿ ಮದುವೆ ಮಾಡಿಕೊಡಲು ಕೇಳಿದ್ದಾರೆ. ಆದರೆ ಜಾತಿಯ ಕಾರಣದಿಂದ ಕೀರ್ತಿಯ ಮನೆಯವರು ಮದುವೆಗೆ ಒಪ್ಪಿರಲಿಲ್ಲ ಗಂಗಾಧರ್‌ನನ್ನು ಮರೆತುಬಿಡು ಎಂದು ಕೀರ್ತಿಯ ಪೋಷಕರು ಆಕೆಗೆ ಹಲವು ಬಾರಿ ಹೇಳಿದ್ದಾರೆ.

 ಆದರೆ ಈ ಪ್ರೇಮಿಗಳಿಬ್ಬರು ತಮ್ಮ ಪ್ರೀತಿಯನ್ನು ಮುಂದುವರೆಸಿದ್ದಾರೆ ಈ ವಿಚಾರವಾಗಿ ಮಂಗಳವಾರ ಬೆಳಿಗ್ಗೆ ಕೀರ್ತಿ ಹಾಗೂ ಆಕೆಯ ತಂದೆ ಕೃಷ್ಣಮೂರ್ತಿ ನಡುವೆ ವಾಗ್ವಾದ ಬೆಳೆದು, ಕೋಪಗೊಂಡ ಕೃಷ್ಣಮೂರ್ತಿ (42) ಮಗಳನ್ನು ಉಸಿರುಗಟ್ಟಿಸಿ ಸಾಯಿಸಿದ್ದಾನೆ ಗಾಢವಾಗಿ ಪ್ರೀತಿಸುತ್ತಿದ್ದ ಕೀರ್ತಿ ಸಾವನ್ನು ಕಂಡ ಗಂಗಾಧ‌ರ ಅದೇ ಗ್ರಾಮದ ಬಳಿ ಚಲಿಸುತ್ತಿದ್ದ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

  ಘಟನೆಗೆ ಸಂಬಂಧಿಸಿದಂತೆ ಕಾಮಸಮುದ್ರ ಪೊಲೀಸ್‌ ಠಾಣೆಯಲ್ಲಿ ಕೃಷ್ಣಮೂರ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. 

  ಈ ಬಗ್ಗೆ ಕೋಲಾರ ಎಸ್‌ಪಿ ಧರಣಿದೇವಿ ಮಾಲಗತ್ತಿ ಮಾಹಿತಿ ನೀಡಿದ್ದು, ”ಪ್ರೀತಿಸಿದ ಯುವಕನನ್ನೇ ಮದುವೆಯಾಗುವುದಾಗಿ ಕೀರ್ತಿ ಹಟ ಹಿಡಿದಿದ್ದಳು. ಈ ಸಂಬಂಧ ಯುವತಿಯ ಮನೆಯಲ್ಲಿ ಸೋಮವಾರ ರಾತ್ರಿ ಜಗಳ ನಡೆದಿತ್ತು. ಮಂಗಳವಾರ ಬೆಳಿಗ್ಗೆ ಕೃಷ್ಣಮೂರ್ತಿ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಇದು ಗೊತ್ತಾಗಿ ಯುವಕ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಹೇಳಿದ್ದಾರೆ.

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಪುಷ್ಪ 2 ಚಿತ್ರ ಬಾಯ್ ಕಟ್ ಗೆ ಕರವೆ ಕರೆ : ಶಂಕರ್ ಗೌಡ

ಬೆಂಗಳೂರು: ಪುಷ್ಪ 2 ಚಿತ್ರವು ಇದೆ ತಿಂಗಳ 05 ನೇ ತಾರೀಖು ಬಿಡುಗಡೆಗೊಳ್ಳುಲ್ಲು ಸಜ್ಜಾಗಿದ್ದು ಚಿತ್ರಕ್ಕೆ ಈಗ ಬಾಯ್ ಕಟ್ ಅಭಿಯಾನದ ಬಿಸಿ ಮುಟ್ಟಿದೆ. ಕರ್ನಾಟಕದಲ್ಲಿ ಕನ್ನಡಿಗರೆ ಸಾರ್ವಭೌಮ ಕನ್ನಡ ಚಿತ್ರಗಳಿಗೆ ಹೆಚ್ಚು ಚಿತ್ರಮಂದಿರಗಳನ್ನು ಕೊಡಬೇಕು ಎಂದು ತಿಳಿಸಿದ್ದಾರೆ. ಹಾಗೇಯೆ ಪುಷ್ಪ…

Leave a Reply

Your email address will not be published. Required fields are marked *