ಬೆಂಗಳೂರು: ಆರೆಸ್ಸೆಸ್ ಆಯೋಜಿಸಿರುವ ಗುರುಪೂಜಾ ಉತ್ಸವದ ಆಹ್ವಾನ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಸಾಹಿತಿ ಹಾಗೂ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಿಸಲಾಗಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ನಾಗತಿಹಳ್ಳಿಯವರು, ಈ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ”ಈ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ.ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ.ಅದು ‘ಆಕಸ್ಮಿಕ’ಎಂದು ಅವರು ಕ್ಷಮೆ ಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ. ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ”
”ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ,ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ,ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ ಮನಸ್ಸುಗಳಿಗೆ ಹೇಳುವ ಒಂದು ಮಾತು: ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ.ಅದನ್ನೇ ಮುಂದುವರೆಸುತ್ತೇನೆ”