ಬೆಂಗಳೂರು: ‘ಸಿದ್ದರಾಮಯ್ಯರ ಸರಕಾರದ ಅನುದಾನದಲ್ಲಿ ನಾನು ಮತ್ತೆ ಶಾಸಕನಾದೆ. ಕರ್ನಾಟಕ ರಾಜ್ಯದಲ್ಲಿ ನುಡಿದಂತೆ ನಡೆಯುವ ರಾಜಕಾರಣಿ ಇದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಮಾಜಿ ಸಚಿವ, ಯಶವಂತ ಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ರವಿವಾರ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆ ಕಾರ್ಯಕ್ರಮದ್ಲಲಿ ಪಾಲ್ಗೊಂಡು ಅವರು ಮಾತನಾಡಿರು.
”2013-18 ರ ಅವಧಿಯ ಸಿದ್ದರಾಮಯ್ಯ ಸರಕಾರ ಕೊಟ್ಟ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. ನಾನು ಪಕ್ಷಾಂತರ ಮಾಡಿದ್ರೂ ಸಿದ್ದರಾಮಯ್ಯರನ್ನು ಮರೆತಿರಲಿಲ್ಲ” ಎಂದರು.
”ಯಾವತ್ತೂ ದ್ವೇಷ ರಾಜಕಾರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯನಾಗಿ, ಅಭಿಮಾನಿಯಾಗಿ ಶಾಖಾಮಠದ ನಿರ್ಮಾಣಕ್ಕೆ ಅಗತ್ಯ ಇರುವ ಎಲ್ಲಾ ನೆರವನ್ನೂ ನೀಡುತ್ತೇನೆ’ ಎಂದು ಘೋಷಿಸಿದರು.
“ನಾನು ಪಕ್ಷಾಂತರ ಮಾಡಿದ್ರೂ ಸಿದ್ಧರಾಮಯ್ಯರನ್ನು ಮರೆತಿರಲಿಲ್ಲ”