ಪುಣೆ: ಕ್ರೈಸ್ತ ಧರ್ಮದ ಪ್ರಾರ್ಥನೆ ನಡೆಸಿದ್ದಾರೆಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಶಾಲೆಯ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಘಟನೆ ಪುಣೆಯ ತಾಲೆಗಾಂವ್ ದಭಾದೆ ಪಟ್ಟಣದಲ್ಲಿರುವ ಡಿ ವೈ ಪಾಟೀಲ್ ಹೈಸ್ಕೂಲಿನಲ್ಲಿ ನಡೆದಿದೆ.
ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈರಲ್ ವೀಡಿಯೋದಲ್ಲಿ, ಪ್ರಾಂಶುಪಾಲ ಅಲೆಕ್ಸಾಂಡರ್ ಕೋಟ್ಸ್ ರೀಡ್ ಅವರನ್ನು ಗುಂಪೊಂದು ಬೆನ್ನಟ್ಟುತ್ತಿದ್ದು, ಕಟ್ಟಡವೊಂದರ ಮೆಟ್ಟಿಲುಗಳನ್ನು ಅವಸರದಿಂದ ಪ್ರಾಂಶುಪಾಲರು ಹತ್ತುತ್ತಿರುವುದು ಹಾಗೂ ಅವರ ಬಟ್ಟೆ ಹರಿದಿರುವುದು ಕಾಣಿಸುತ್ತದೆ. ನಂತರ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬ ಪ್ರಾಂಶುಪಾಲರಿಗೆ ಹಲ್ಲೆ ನಡೆಸುವುದು ವೀಡಿಯೋದಲ್ಲಿ ಕಾಣಿಸುತ್ತದೆ.