ಜೆಪಿಯ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ಮಹಿಳೆಯರು, ಆದಿವಾಸಿಗಳು ಮತ್ತು ದಲಿತರು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಧ್ಯಪ್ರದೇಶದ ಉಜ್ಜಯಿನಿ ನಗರದ ರಸ್ತೆಯೊಂದರಲ್ಲಿ ಅತ್ಯಾಚಾರಕ್ಕೊಳಗಾದ ಮತ್ತು ರಕ್ತಸ್ರಾವವಾಗುತ್ತಿರುವ ಅಪ್ರಾಪ್ತ ಬಾಲಕಿಯನ್ನು ಬುಧವಾರ ತಜ್ಞ ವೈದ್ಯರ ತಂಡವು ಶಸ್ತ್ರಚಿಕಿತ್ಸೆಗೆ ಒಳಪಡಿಸಿತು ಮತ್ತು ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವಿಚಾರವಾಗಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದು, ”ಉಜ್ಜಯಿನಿಯಲ್ಲಿ ಪುಟ್ಟ ಬಾಲಕಿಯ ಮೇಲೆ ನಡೆದ ಕ್ರೌರ್ಯವು ಆತ್ಮವನ್ನು ಛಿದ್ರಗೊಳಿಸುತ್ತದೆ. ಚಿತ್ರಹಿಂಸೆಯ ನಂತರ, ಅವಳು ಸಹಾಯಕ್ಕಾಗಿ ಮನೆಯಿಂದ ಮನೆಗೆ ಅಲೆದಾಡುತ್ತಿದ್ದಳು. – ಒಂದೂವರೆ ಗಂಟೆಗಳ ನಂತರ ರಸ್ತೆಯಲ್ಲಿ ಪ್ರಜ್ಞಾಹೀನಳಾಗಿ ಬಿದ್ದಳು. ಆದರೆ ಆಕೆಗೆ ಯಾರೂ ಸಹಾಯ ಮಾಡಲಿಲ್ಲ. ಇದು ಮಧ್ಯಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಮಹಿಳೆಯರ ಸುರಕ್ಷತೆಯೇ? ಬಿಜೆಪಿಯ 20 ವರ್ಷಗಳ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ಮಹಿಳೆಯರು, ಆದಿವಾಸಿಗಳು ಮತ್ತು ದಲಿತರು ಸುರಕ್ಷಿತವಾಗಿಲ್ಲ” ಎಂದು ಕಿಡಿಕಾರಿದರು.
ಹೆಣ್ಣುಮಕ್ಕಳಿಗೆ ರಕ್ಷಣೆ, ಸಹಾಯವೂ ಸಿಗದಿದ್ದರೆ ‘ಲಾಡ್ಲಿ ಬೆಹನಾ’ ಹೆಸರಿನಲ್ಲಿ ಚುನಾವಣಾ ಘೋಷಣೆ ಮಾಡಿ ಏನು ಪ್ರಯೋಜನ? ಎಂದು ಪ್ರಿಯಾಂಕಾ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಉಜ್ಜಯಿನಿಯ ರಸ್ತೆಯೊಂದರಲ್ಲಿ 12 ವರ್ಷದ ಅತ್ಯಾಚಾರ ಸಂತ್ರಸ್ತೆಯ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಮಹಿಳೆಯರು ಮತ್ತು ಹುಡುಗಿಯರ ಘನತೆಯನ್ನು ಕಾಪಾಡಲು ಅಸಮರ್ಥವಾಗಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಚುನಾವಣಾ ಪ್ರಚಾರದಲ್ಲಿ ಸ್ವಲ್ಪ ಸಮಯ ತೆಗೆದುಕೊಂಡರೆ ಮಾತ್ರ ಮಹಿಳೆಯರ ಕಿರುಚಾಟ ಕೇಳಲು ಸಾಧ್ಯವಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.