ಸಂಸದ ತೇಜಸ್ವಿ ಸೂರ್ಯನ ಸುಳ್ಳು ಮಾಹಿತಿ: ಭಯೋತ್ಪಾದಕನನ್ನು ಬಂಧಿಸಿ ಎಂದ ಚಿಕ್ಕಮಾರನಹಳ್ಳಿ ಅನಂತ್

ಹಾವೇರಿ: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ, ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ವಕ್ಫ್ ನೋಟಿಸ್ ಬಂದಿದ್ದೇ ಆತ್ಮಹತ್ಯೆಗೆ ಕಾರಣ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಹರನಗೇರಿ ರೈತ‌ ರುದ್ರಪ್ಪ ಆತ್ಮಹತ್ಯೆ ಬಗ್ಗೆ ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ, ವಕ್ಫ್​​ ನೋಟಿಸ್​ಗೆ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದರು.

ತೇಜಸ್ವಿ ಸೂರ್ಯ ಟ್ವೀಟ್​​ನಲ್ಲೇನಿತ್ತು?

ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ರೈತ‌ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮ ವರದಿಯೊಂದನ್ನು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ‘ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಉಲ್ಲೇಖಿಸಿದ್ದರು. ಇದೀಗ ಈ ಟ್ವೀಟ್​ ಅನ್ನು ಅಳಿಸಿಹಾಕಲಾಗಿದೆ.

ಜಿಲ್ಲಾಡಳಿತ ನೀಡಿದ್ದ ಸ್ಪಷ್ಟನೆ ಏನು?

ಆಸ್ತಿ ದಾಖಲೆಯಲ್ಲಿ ವಕ್ಫ್ ಹೆಸರು ನಮೂದಾಗಿರುವುದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಗಳ ಬಗ್ಗೆ ನಂತರ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿತ್ತು. ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಕ್ಕೆ ರೈತ ಆತ್ಮಹತ್ಯೆಗೆ ಶರಣಾಗಿಲ್ಲ. ಅವರು ಸಾಲಬಾಧೆಯಿಂದ ನೊಂದಿದ್ದರು ಎಂದು ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದ್ದವು.

ಹಾವೇರಿ ಪೊಲೀಸರು ಹೇಳಿದ್ದೇನು?

ಮೃತನ ಬಗ್ಗೆ ಪಿಎಸ್‌ಐ ಆಡೂರ ಅವರು ತನಿಖೆ ಕೈಗೊಂಡು, ಆತನು ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಅಂತಾ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ತಹಶೀಲ್ದಾರ ಹಾನಗಲ್ ರವರಿಗೆ ಸಲ್ಲಿಸಿರುತ್ತಾರೆ. ಮೃತನ ಕುಟುಂಬಕ್ಕೆ ಸರ್ಕಾರದಿಂದ 05 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ ಎಂದು ಹಾವೇರಿ ಪೊಲೀಸರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದರು.

ಭಯೋತ್ಪಾದಕ ಕೂಡಲೆ ತೇಜಸ್ವಿ ಸೂರ್ಯನ್ನು ಬಂಧಿಸಿ: ಚಿಕ್ಕಮಾರನಹಳ್ಳಿ ಅನಂತ್

ಇದೇನು ಮೊದಲಲ್ಲ, ಸದಾ ಸುಳ್ಳು ಸುದ್ಧಿಗಳನ್ನೆ ಹರಡಲು ತಯಾರಿಸಿರುವ ಫ್ಯಾಕ್ಟರಿಯ ನೌಕರನಾಗಿ ತೇಜಸ್ವಿ ಸೂರ್ಯ ರವರಿಂದ ಇನ್ನೇನು ನಿರೀಕ್ಷಸಲು ಸಾಧ್ಯ. ಸಮಾಜದಲ್ಲಿ ಸದಾ ಜನರ ನಡುವೆ ಅಶಾಂತಿಯನ್ನು ಉಂಟು ಮಾಡಿವ ಸಲುವಾಗಿಯೆ ಇಂತಹ ಅನೇಕ ಸುಳ್ಳುಗಳನ್ನು ಸೃಷ್ಠಿಸಿ ಫೇಸ್ಬುಕ್ ವಾಟ್ಸಪ್ ಗಳ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಹರಿದು ಬಿಡಲಾಗುತ್ತಿದೆ ಇಂತಹವರನ್ನು ಭಯೋತ್ಪಾದಕರು ಎಂದರೆ ತಪ್ಪಾಗಲಾರದು. ಅಂತಹ ಸಾಲಿಗೆ ಒಬ್ಬ ಜವಾಬ್ದಾರಿಯುತ ಸಂಸದರಾಗಿರುವ ತೇಜಸ್ವಿ ಸೂರ್ಯ ಈ ಹಿಂದಿನ ದಿನಗಳಲ್ಲಿಯೂ ಕೂಡ ಸೇರಿದ್ದರು ಈಗಲೂ ಮತ್ತೊಮ್ಮೆ ಸೇರಿದ್ದಾರೆ ಈ ಕೂಡಲೆ ಇವರನ್ನು ಭಯೋತ್ಪಾದಕ ಕೃತ್ಯದ ಅಡಿಯಲ್ಲಿ ಬಂಧಿಸಿ ಸಂಸದ ಸ್ಥಾನದಿಂದ ವಜಾಗೋಳಿಸಲು ರಾಜ್ಯ ಮತ್ತು ಕೇಂದ್ರ ಒಕ್ಕೂಟ ಸರ್ಕಾರಗಳನ್ನು ಆಗ್ರಸಿಸುತ್ತಿದ್ದೇನೆ.‌ ಎಂದು Chikkamaranahalliananth ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದಾರೆ.

https://twitter.com/ananthdr_/status/1854759745623932981?t=5gDg5oloMoaBHJfzZ-afrA&s=09
https://twitter.com/ananthdr_/status/1854759813043175747?t=0p6NRbOfd1ElvXt3tPqFbw&s=19

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

Leave a Reply

Your email address will not be published. Required fields are marked *