ಬಿಜೆಪಿ ಅಧಿಕಾರದಲ್ಲಿದ್ದಾಗ ‘ಕರ್ನಾಟಕ ನೀರಾವರಿ ನಿಗಮದ 300 ಕೋಟಿ ರೂ. ಮಠಗಳು, ಸಮುದಾಯ ಭವನಗಳಿಗೆ ಬಳಕೆ

ಬೆಂಗಳೂರು: ನೀರಾವರಿ ಕಾಮಗಾರಿಗೆಂದು ಸ್ಥಾಪಿಸಲಾಗಿರುವ ‘ಕರ್ನಾಟಕ ನೀರವಾರಿ ನಿಗಮ ಲಿಮಿಟೆಡ್’ ನಲ್ಲಿನ ಅನುದಾನವನ್ನು ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿ, ಶಾಸಕರು ಪ್ರಾಬಲ್ಯ ಬಳಸಿಕೊಂಡು ನಿರಾವರಿಯೇತರ ಕಾಮಗಾರಿಗೆ ಬಳಸಿರುವ ಆರೋಪ ಕೇಳಿ ພ໐໖໖.

ಶಿವಮೊಗ್ಗ ಜಿಲ್ಲೆಯ ಶಾಸಕರು ಮತ್ತು ಸಂಸದರ ಮನವಿ ಆಧರಿಸಿ 2020ರಿಂದ 2023ರ ಅವಧಿಯಲ್ಲಿ ಸಮುದಾಯ ಭವನಗಳು, ಮಠಗಳು ಮತ್ತು ಬೆರಳೆಣಿಕೆಯಷ್ಟು ಶಾದಿ ಮಹಲ್‌ಗಳನ್ನು ನಿರ್ಮಿಸಲು ‘ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್’ ನ ನೂರಾರು ಕೋಟಿ ರೂ. ಬಳಕೆ ಮಾಡಲಾಗಿದೆ.

ಕಳೆದ ಒಂದು ವರ್ಷದಲ್ಲಿ ಕರ್ನಾಟಕ ನೀರಾವರಿ ನಿಗಮ ಅಥವಾ ಕೆಎನ್‌ಎನ್‌ಎಲ್ ನಷ್ಟದಲ್ಲಿದ್ದು, ನಿಗಮದಲ್ಲಿನ ಹಣಕಾಸಿನ ಕೊರತೆಯು ಕಾಲುವೆಗಳ ದುರಸ್ತಿಯಂತಹ ನಿರ್ಣಾಯಕ ಕೆಲಸಗಳ ಮೇಲೆ ಪರಿಣಾಮ ಬೀರಿದೆ.

ನಾವು 6,000 ಕೋಟಿ ರೂ.ನಷ್ಟು ಪಾವತಿ ಬಾಕಿ ಹೊಂದಿದ್ದೇವೆ, 2 ಕೋಟಿ ರೂ.ಗಳ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಹಲವು ತಿಂಗಳು ಕಾದ ಬಳಿಕ 8 ಲಕ್ಷ ರೂ. ನೀಡಲಾಗಿದೆ. ಶಿವಮೊಗ್ಗ ಒಂದರಲ್ಲೇ ಬಾಕಿ ಉಳಿದಿರುವ ಹಲವು ಯೋಜನೆಗಳಿಗೆ ಸುಮಾರು 2 ಸಾವಿರ ಕೋಟಿ ರೂ.ಗಳ ಅಗತ್ಯವಿದೆ ಎಂದು ಮೂಲಗಳು ತಿಳಿಸಿವೆ.

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

Leave a Reply

Your email address will not be published. Required fields are marked *