ಮಣಿಪುರ: ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ NPP

ಶಿಲ್ಲಾಂಗ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯಲಾಗಿದೆ ಎಂದು ನ್ಯಾಷನಲ್ ಜನತಾ ಪಕ್ಷ- NPP ಭಾನುವಾರ ತಿಳಿಸಿದೆ. ಈಶಾನ್ಯ ರಾಜ್ಯದಲ್ಲಿ ಸಮಸ್ಯೆಯನ್ನು ಪರಿಹರಿಸಲು ಮತ್ತು ಸಹಜ ಪರಿಸ್ಥಿತಿ ತರುವಲ್ಲಿ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು NPP ಆರೋಪಿಸಿದೆ.

60 ಸದಸ್ಯರ ಮಣಿಪುರ ವಿಧಾನಸಭೆಯಲ್ಲಿ ಏಳು NPP ಶಾಸಕರಿದ್ದಾರೆ. ಆಡಳಿತರೂಢ ಬಿಜೆಪಿ 32 ಸ್ಥಾನಗಳನ್ನು ಪಡೆದು ಸರಳ ಬಹುಮತ ಮಾಡಿದೆ. ಬಿಜೆಪಿ ಮಿತ್ರ ಪಕ್ಷ ಜೆಡಿಯು ಕೂಡಾ 6 ಸ್ಥಾನಗಳಲ್ಲಿ ಗೆಲುವು ಕಂಡಿದೆ.

ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನರು ಭಯದಿಂದ ಬದುಕುತ್ತಿದ್ದು, ಅತಿಯಾದ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ ಬಿಜೆಪಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ NPP ಪತ್ರ ಬರೆದಿದೆ.

ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಸಮಸ್ಯೆಯನ್ನು ಪರಿಹರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ನೀಡಿದ್ದ ಬೆಂಬಲವನ್ನು ತಕ್ಷಣದಿಂದ ಹಿಂಪಡೆಯಲಾಗಿದೆ ಎಂದು NPP ಹೇಳಿದೆ.

Related Posts

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲ : ಗುಜರಾತ್ ಬಿಜೆಪಿ ಸರ್ಕಾರ 

ಆತ್ಮೀಯರೇ,  ಇದ್ದಕ್ಕಿದ್ದಂತೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅಪ್ಪಿಕೊಳ್ಳಲು ಹೊರಟಿರುವ ಸಂಘಿಗಳು ಏನೇ ನಾಟಕವಾಡಿದರೂ….  ಅವರ ಸಂವಿಧಾನ ದ್ವೇಷ ಮತ್ತು ಅಂಬೇಡ್ಕರ್ ದ್ವೇಷವನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ….   ಅದರ ಮತ್ತೊಂದು ಉದಾಹರಣೆ ಇಲ್ಲಿದೆ…   ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ…

Leave a Reply

Your email address will not be published. Required fields are marked *