ರಾಜ್ಯದಲ್ಲಿ 250ಕ್ಕೂ ಹೆಚ್ಚು ಔಷಧಿಗಳು ಔಟ್ ಆಫ್ ಸ್ಟಾಕ್; ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರೆಗಳ ಕೊರತೆ!

ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿದ್ರೂ ಜೀವರಕ್ಷಕ ಔಷಧಗಳು ಸ್ಟಾಕ್ ಇಲ್ಲ, ಸುಮಾರು 250ಕ್ಕೂ ಹೆಚ್ಚು ಔಷಧಿಗಳು ಔಟ್ ಆಫ್ ಸ್ಟಾಕ್ ಆಗಿದ್ದು, ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಾಗುತ್ತಿಲ್ಲ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 250 ಔಷಧಗಳ ದಾಸ್ತಾನು ಶೂನ್ಯವಿದೆ. ವಿವಿಧ ಟೆಂಡರ್ ಪ್ರಕ್ರಿಯೆ ಮುಗಿದಿದ್ದರೂ ಆದೇಶಪತ್ರ ನೀಡುವುದಕ್ಕೆ ವಿಳಂಬವಾಗಿದೆ. ಈ ಹಿನ್ನೆಲೆ ಜೀವರಕ್ಷಕ ಔಷಧಗಳು ಪೂರೈಕೆಯಾಗುತ್ತಿಲ್ಲ. ಸರ್ಕಾರಿ ಆಸ್ಪತ್ರಗಳಲ್ಲಿ ಔಷಧಿಗಳು ಸ್ಟಾಕ್ ಇರದ ಕಾರಣದಿಂದಾಗಿ ರೋಗಿಗಳು ದುಬಾರಿ ಬೆಲೆ ಕೊಟ್ಟು ಖಾಸಗಿ ಆಸ್ಪತ್ರೆ ಅಥವಾ ಮೆಡಿಕಲ್​ಗೆ ತೆರಳಬೇಕಾದ ಅನಿವಾರ್ಯತೆ ಉಂಟಾಗಿದೆ.
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ (KSMSCL) ಔಷಧ ಪೂರೈಕೆಗೆ ಪ್ರತೀ ವರ್ಷ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತದೆ. ಬ್ಯಾಂಡೇಜ್ ಕ್ಲಾತ್, ಕಾಟನ್, ಸರ್ಜಿಕಲ್ ಗ್ಲೌಸ್, ಗ್ಲೂಕೋಸ್ ಬಾಟಲ್, ಬಯೋಟಿಕ್ ಮಾತ್ರೆ ಸೇರಿದಂತೆ ವಿವಿಧ ವೈದ್ಯಕೀಯ ಸಲಕರಣೆಗಳನ್ನು ಈ ನಿಗಮ ಖರೀದಿಸುತ್ತದೆ. ಆದರೆ, ಬೇರೆ ರಾಜ್ಯಕ್ಕೆ ಹೋಲಿಸಿದರೆ ಟೆಂಡರ್ ಪ್ರಕ್ರಿಯೆಯಲ್ಲಿ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ ಭಾರೀ ಹಿಂದೆದೆ. ಇದೀಗ ಇದರ ಪರಿಣಾಮ ಸಾಮಾನ್ಯ ವರ್ಗದ ರೋಗಿಗಳ ಮೇಲೆ ಬೀಳುತ್ತಿದೆ.

ಶ್ವಾಸಕೋಶ, ಕರುಳು, ರಕ್ತಹೀನತೆ, ನ್ಯಮೋನಿಯಾ, ಅಸ್ತಮಾ, ಮಧುಮೇಹ, ಬಿ.ಪಿ, ಹೃದಯಾಘಾತ, ಕಣ್ಣಿನ ಸೋಂಕು ಸೇರಿದಂತೆ ಹಲವು ಗಂಭೀರ ಖಾಯಿಲೆಗಳನ್ನು ನಿಭಾಯಿಸುವ ಔಷಧಗಳ ಅಭಾವ ಉಂಟಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಸಿಟಮಲ್, ಅಲ್ಬುಮಿನಿ, ಆ್ಯಂಪ್ಸಿಲಿನ್, ಲೆವೊಥ್ರಕ್ಸಿನ್, ವಿಲ್ಡಗ್ಲೀಪ್ಟನ್, ಪ್ಯಾರಸಿಟಾ, ನ್ಯುಸ್ಟೊಜಿಮೈನ್, ಸಬ್ಲೋಟೊಮಲ್, ಅಸ್ಟೊಪೈನ್ ಸೇರಿದಂತೆ ವಿವಿಧ ಮಾತ್ರೆಗಳ ಕೊರತೆ ಉಂಟಾಗಿದೆ.

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

Leave a Reply

Your email address will not be published. Required fields are marked *