ಮಾವನ ಮಸಲತ್ತಿನಿಂದ ಪ್ರಾಣ ಬಿಟ್ಟ ಮುದ್ದಾದ ಸೊಸೆ. ಮುದ್ದಾದ ಸೊಸೆಯ ಸಾವಿಗೆ ಕಾರಣವಾಯ್ತಾ ಮಾವನ ಅಸಹ್ಯ ವಾಟ್ಸಾಪ್ ಮೆಸೇಜ್!? ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗೃಹಿಣಿಯೊಬ್ಬರ ಸೂಸೈಡ್ ಪ್ರಕರಣ ಸಖತ್ ಸದ್ದು ಮಾಡಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ಸಂಬಂಧ ಮೃತಳ ಪತಿ, ಮಾವ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು. ವಾರದ ಬಳಿಕ ಈ ಪ್ರಕರಣದ ಹಿಂದಿನ ಅಸಲಿಯತ್ತು ಹೊರಬಿದ್ದಿತ್ತು. 2023ರ ಅಕ್ಟೋಬರ್ 3ರಂದು ಪ್ರಸಿದ್ಧ ಸೀತಾ ಡೈರಿ ರಿಚ್ ಐಸ್ ಕ್ರೀಂ ಕಂಪನಿ ಮಾಲೀಕನ ಸೊಸೆ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಳು. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಎಂಬಾತನನ್ನು ಐಶ್ವರ್ಯ ಮದುವೆಯಾಗಿದ್ದಳು. ಕುಟುಂಬಸ್ಥರ ನಿಶ್ಚಯದಂತೆ ಈ ಜೋಡಿಯ ಮದುವೆಯಾಗಿತ್ತು. ಪ್ರತಿಭಾವಂತೆಯಾಗಿದ್ದ ಐಶ್ವರ್ಯ ಅಮೆರಿಕದಲ್ಲಿ ಎಂಬಿಎ ಮಾಡಿದ್ದಳು. ಪತಿ ರಾಜೇಶ್ ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಮಾಲೀಕರಾಗಿದ್ದರು. ಇದೇ ಕಂಪನಿಯಲ್ಲಿ ಐಶ್ವರ್ಯ ತಂದೆ ಸುಬ್ರಮಣಿಯ ತಂಗಿ ಗಂಡ ರವೀಂದ್ರ ಆಡಿಟರ್ ಆಗಿ ಕೆಲಸ ಮಾಡಿಕೊಂಡಿದ್ದ.
ಈತನೇ ಮುಂದೆ ನಿಂತು ರಾಜೇಶ್ ಹಾಗೂ ಐಶ್ವರ್ಯ ಮದುವೆ ಮಾಡಿಸಿದ್ದ. ಆದರೆ ಆಸ್ತಿ ವಿಚಾರವಾಗಿ ರವೀಂದ್ರ ಮತ್ತು ಸುಬ್ರಮಣಿ ಕುಟುಂಬದಲ್ಲಿ ಕಲಹ ಇದ್ದಿದ್ದರಿಂದ ತಂದೆ ಮೇಲಿನ ದ್ವೇಷಕ್ಕೆ ಮಗಳ ಸಂಸಾರದಲ್ಲಿ ದಾಯಾದಿಗಳು ಹುಳಿ ಹಿಂಡಿದ್ದರು. ರವೀಂದ್ರ ಕುಟುಂಬ ಐಶ್ಯರ್ಯಳ ಚಾರಿತ್ರ್ಯ ವಧೆ ಮಾಡಿ ಪತಿ ರಾಜೇಶ್ ಕುಟುಂಬಕ್ಕೆ ಇಲ್ಲಸಲ್ಲದ ಕಟ್ಟುಕಥೆ ಹೇಳುತ್ತಿತ್ತು. ಅಷ್ಟೇ ಅಲ್ಲದೇ ಐಶ್ವರ್ಯಳ ಪೋಟೋಗಳನ್ನು ಕಳುಹಿಸಿ ನಿಮ್ಮ ಸೊಸೆ ಸರಿಯಿಲ್ಲವೆಂದು ಕೆಟ್ಟದಾಗಿ ಬಿಂಬಿಸಿದ್ದರಂತೆ. ಇದರಿಂದ ರಾಜೇಶ್ ಕುಟುಂಬ ಸದಸ್ಯರು ಪ್ರತಿನಿತ್ಯ ಐಶ್ವರ್ಯಳಿಗೆ ಕಿರುಕುಳ ನೀಡಳು ಪ್ರಾರಂಭಿಸಿದ್ದಳು.
ಐಶ್ವರ್ಯಳ ಮಾವ ಗಿರಿಯಪ್ಪ, ಅತ್ತೆ ಸೀತಾ ಹಾಗೂ ಮೈದುನ ವಿಜಯ್ ಹಾಗೂ ಆತನ ಪತ್ನಿ ತಸ್ಮಿನ್ ಕಿರುಕುಳ ನೀಡುತ್ತಿದ್ದರಂತೆ. ಸಾಲದ್ದಕ್ಕೆ ಮಾವ ಸೊಸೆಗೆ ಅಸಹ್ಯವಾಗಿ ವಾಟ್ಸಾಪ್ ಮೇಸೆಜ್ ಸಹ ಮಾಡಿದ್ದನಂತೆ. ವರದಕ್ಷಿಣೆ ತರುವಂತೆಯೂ ಕಿರುಕುಳ ನೀಡಿದ ಆರೋಪ ಕೇಳಿಬಂದಿತ್ತು. ಎಷ್ಟೇ ಕಿರುಕುಳ ನೀಡುತ್ತಿದ್ದರೂ ಗಂಡನಿಗಾಗಿ ಐಶ್ವರ್ಯ ಸುಮ್ಮನಿದ್ದಳಂತೆ. ತಾನು ದುಡಿದ ಹಣದಲ್ಲಿ ಗಂಡನಿಗೆ ಐಶಾರಾಮಿ ಸೂಪರ್ ಬೈಕ್ ಹಾಗೂ ಚಿನ್ನದ ಒಡವೆ ಸಹ ಕೊಡಿಸಿದ್ದಳಂತೆ. ಆದರೆ ಕುಟುಂಬಸ್ಥರ ಮಾತನ್ನು ಕೇಳಿ ಪತಿ ರಾಜೇಶ್ ಸಹ ಐಶ್ವರ್ಯಳನ್ನು ನಿಂದಿಸುತ್ತಿದ್ದನಂತೆ. ಇದರಿಂದ ನೊಂದು ಗಂಡನ ಮನೆಬಿಟ್ಟು ಬೆಂಗಳೂರಿನಲ್ಲಿರುವ ತವರು ಮನೆಗೆ ಐಶ್ವರ್ಯ ಬಂದಿದ್ದಳಂತೆ. ಆದರೆ ಅಕ್ಟೋಬರ್ 26ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪ್ರಕರಣ ಸಂಬಂಧ ಐಶ್ವರ್ಯ ತಾಯಿ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗಂಡ ರಾಜೇಶ್, ಅತ್ತೆ ಸೀತಾ, ಮಾವ ಗಿರಿಯಪ್ಪ, ಮೈದುನ ವಿಜಯ ಹಾಗೂ ಆತನ ಪತ್ನಿ ತಸ್ಮಿನ್ ವಿರುದ್ಧ ದೂರು ನೀಡಿದ್ದಾರೆ. ಇವರ ಸುಂದರ ಸಂಸಾರ ಒಡೆಯಲು ಪ್ರೇರೆಣೆ ನೀಡಿದ್ದ ಸಂಬಂಧಿಕರಾದ ರವೀಂದ್ರ, ಗೀತಾ, ಶಾಲಿನಿ ಮತ್ತು ಓಂಪ್ರಕಾಶ್ ಎಂಬುವವರ ಮೇಲೂ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿ ಐಶ್ವರ್ಯ ಪತಿ ರಾಜೇಶ್ ಸೇರಿ 5 ಮಂದಿ ಆರೋಪಿಗಳನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ಐಶ್ವರ್ಯ ತಂದೆಯ ಸಹೋದರಿ ಶಾಲಿನಿ ಹಾಗೂ ಓಂಪ್ರಕಾಶ್ ಅಮೆರಿಕದಲ್ಲಿದ್ದಾರೆ. ಸಾವಿನಲ್ಲೂ ಮಾನವೀಯತೆ ಮೆರೆದ ಐಶ್ವರ್ಯ ಕುಟುಂಬಸ್ಥರು ಆಕೆಯ ಸಾವಿನ ಬಳಿಕ ಆಕೆಯ ಕಣ್ಣುದಾನ ಮಾಡಿದ್ದರು.