ಇಂದಿನಿಂದ ದೆಹಲಿಯಲ್ಲೂ ನಮ್ಮ ಕನ್ನಡಿಗ ಹೆಮ್ಮೆಯ ನಂದಿನಿ ಉತ್ಪನ್ನಗಳ ಮಾರಾಟ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಇದರೊಂದಿಗೆ, ದೇಶದ ರಾಜಧಾನಿಯಲ್ಲೂ ನಂದಿನಿ ಉತ್ಪನ್ನಗಳ ಹವಾ ಆರಂಭವಾಗಲಿದೆ. ಈ ಮೂಲಕ ಅಮುಲ್‌ ಮತ್ತು ಮದರ್‌ ಡೇರಿಯಂತಹ ಪ್ರಮುಖ ಬ್ರ್ಯಾಂಡ್​ಗಳ ಜತೆ ಕರ್ನಾಟಕದ ನಂದಿನಿ ಕೂಡ ಪೈಪೋಟಿ ಒಡ್ಡಲಿದೆ.

ದೆಹಲಿಯ ಅಶೋಕ ಹೊಟೇಲ್​​ನಲ್ಲಿ ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಬಿಡುಗಡೆ ಮಾಡುವ ಮೂಲಕ ಅಧಿಕೃತ ಮಾರಾಟಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ದೆಹಲಿಯ ಅಶೋಕ್ ಹೊಟೇಲ್​ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಕನ್ನಡಿಗರಿಂದ ಪೂರ್ಣಕುಂಭ ಸ್ವಾಗತ ದೊರೆಯಿತು.

ಸಚಿವರಾದ ಭೈರತಿ ಸುರೇಶ್, ವೆಂಕಟೇಶ್, ಚಲುವರಾಯಸ್ವಾಮಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಿಎಂಗೆ ಸಾಥ್ ನೀಡಿದರು.

3-4 ಲಕ್ಷ ಲೀಟರ್ ಹಾಲು ಮಾರಾಟ ಗುರಿ

ದೆಹಲಿಯಲ್ಲಿ 3 ರಿಂದ 4 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡಬೇಕು ಎಂಬ ಗುರಿ ಹಾಕಿಕೊಂಡಿದ್ದೇವೆ. ಇನ್ನು ಮುಂದೆ ದೆಹಲಿಯಲ್ಲಿ ಶೇ 100 ರಷ್ಟು ಪರಿಶುದ್ಧ ಹಾಲು ಸಿಗಲಿದೆ. ಶುದ್ಧ ಹಸುವಿನ ಹಾಲನ್ನು ದೆಹಲಿ ಜನರಿಗೆ ನೀಡುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ಹೇಳಿದರು.

ವಿಶ್ವಮಟ್ಟದಲ್ಲಿ ನಂದಿನಿ ಹವಾ

ಕೆಲವು ತಿಂಗಳ ಹಿಂದೆ ಅಮೆರಿಕ ಹಾಗೂ ವೆಸ್ಟ್ ಇಂಡೀಸ್​​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ವೇಳೆ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವವನ್ನು ಕೆಎಂಎಫ್​ ವಹಿಸಿತ್ತು. ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಜೆರ್ಸಿ ಮೇಲೆ ಪ್ರಾಯೋಜಕರಾಗಿ ‘ನಂದಿನಿ’ ಬ್ರ್ಯಾಂಡ್ ಹೆಸರು ನಮೂದಿಸಲಾಗಿತ್ತು. ಅಷ್ಟೇ ಅಲ್ಲದೆ, ವಿಶ್ವಕಪ್ ವೇಳೆ ನಂದಿನಿ ಉತ್ಪನ್ನಗಳನ್ನೂ ಪೂರೈಸಲಾಗಿತ್ತು. ಆ ಮೂಲಕ ವಿಶ್ವಮಟ್ಟದಲ್ಲಿ ನಂದಿನಿ ಬ್ರ್ಯಾಂಡ್ ಉತ್ಪನ್ನಗಳು ಗಮನ ಸೆಳೆದಿದ್ದವು.

ವಿಶ್ವಕಪ್ ವೇಳೆ ನಂದಿನಿ ಬ್ರ್ಯಾಂಡ್​ನ ಫ್ರೋಝನ್ ಸಿಹಿತಿಂಡಿಗಳು, ಹಾಲಿನಿಂದ ಕೂಡಿದ ಎನರ್ಜಿ ಡ್ರಿಂಕ್ ನಂದಿನಿ ಸ್ಪ್ಲಾಶ್​ ಅನ್ನು ಕೆಎಂಎಫ್​​ ಅಮೆರಿಕಕ್ಕೆ ಪೂರೈಕೆ ಮಾಡಿತ್ತು. ಕರ್ನಾಟಕ ಹಾಲು ಒಕ್ಕೂಟ ಕೆಎಂಎಫ್​ ಈಗ 50 ವರ್ಷದ ಮೈಲಿಗಲ್ಲು ಸಾಧಿಸಿದ್ದು, ಈ ಸಂದರ್ಭದಲ್ಲೇ ಸಂಸ್ಥೆಯ ಉತ್ಪನ್ನಗಳು ದೇಶ ವಿದೇಶಗಳಲ್ಲಿ ಸದ್ದು ಮಾಡುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಉತ್ಪನ್ನಗಳ ಅಧಿಕೃತ ಮಾರಾಟ ಆರಂಭವಾಗಿದೆ.

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲ : ಗುಜರಾತ್ ಬಿಜೆಪಿ ಸರ್ಕಾರ 

ಆತ್ಮೀಯರೇ,  ಇದ್ದಕ್ಕಿದ್ದಂತೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅಪ್ಪಿಕೊಳ್ಳಲು ಹೊರಟಿರುವ ಸಂಘಿಗಳು ಏನೇ ನಾಟಕವಾಡಿದರೂ….  ಅವರ ಸಂವಿಧಾನ ದ್ವೇಷ ಮತ್ತು ಅಂಬೇಡ್ಕರ್ ದ್ವೇಷವನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ….   ಅದರ ಮತ್ತೊಂದು ಉದಾಹರಣೆ ಇಲ್ಲಿದೆ…   ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ…

Leave a Reply

Your email address will not be published. Required fields are marked *