ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದ್ದು 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಮುದುಕ ಅತ್ಯಾಚಾರ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯಿದ್ದ ಎದುರು ಮನೆಯ ಮಹಿಳೆಯಿಂದ ಪ್ರಕರಣ ಬೆಳಕಿಗೆ ಬಂದಿದ್ದು ಈ ವಿಷಯ ತಿಳಿಯುತ್ತಿದ್ದಂತೆ ಅತ್ಯಾಚಾರವೆಸಗಿದ ವೃದ್ಧನಿಗೆ ಥಳಿಸಿದ ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.
ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು
ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…