ಉತ್ತರ ಕನ್ನಡ: ಗಂಟಲಲ್ಲಿ ಬಲೂನ್ ಸಿಲುಕಿ 13 ವರ್ಷದ ಬಾಲಕ ಸಾವು!

ಹಳಿಯಾಳ: ಊದುತ್ತಿದ್ದ ಬಲೂನ್ ನುಂಗಿದ ಪರಿಣಾಮ 13 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗೇನಕೊಪ್ಪ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ನವೀನ್ ನಾರಾಯಣ ಬೆಳಗಾಂವಕರ ಮೃತ ಬಾಲಕ, ಆತ 7 ನೇ ತರಗತಿ ವಿದ್ಯಾರ್ಥಿಯಾಗಿದ್ದ. ಸಂಜೆ ಮನೆಯಲ್ಲಿ ಬಲೂನ್ ಊದುತ್ತಿದ್ದಾಗ ಗಂಟಲಲ್ಲಿ ಬಲೂನ್ ಸಿಕ್ಕಿಹಾಕಿಕೊಂಡಿತ್ತು.

ಉಸಿರಾಡಲು ಹರಸಾಹಸ ಪಡುತ್ತಿದ್ದ ಆತನನ್ನು ಪೋಷಕರು ಹಾಗೂ ನೆರೆಹೊರೆಯವರು ಹಳಿಯಾಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅವರನ್ನು ರಕ್ಷಿಸಲು ವೈದ್ಯರ ತಂಡ ನಡೆಸಿದ ಪ್ರಯತ್ನ ವ್ಯರ್ಥವಾಯಿತು. ಆಸ್ಪತ್ರೆಯಲ್ಲಿ ದಾಖಲಾದ ಕೆಲವೇ ಗಂಟೆಗಳಲ್ಲಿ ಬಾಲಕ ಮೃತಪಟ್ಟಿದ್ದಾನೆ. ಹಳಿಯಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Posts

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ದುರಂತ ಅಂತ್ಯ, ದೈತ್ಯ ಅಲೆಗೆ ಬಲಿ!

ಥಾಯ್ಲೆಂಡ್ :  ಸಮುದ್ರದ ತೀರದಲ್ಲಿನ ಬಂಡೆಗಳ ಮೇಲೆ ಕುಳಿತು ಪ್ರಾಣಾಯಾಮ ಸೇರಿದಂತೆ ಯೋಗಾಭ್ಯಾಸದಲ್ಲಿ ನಿರತಳಾಗಿದ್ದ ಖ್ಯಾತ ನಟಿ ಮೇಲೆ ಭೀಕರ ಸಮುದ್ರದ ಅಲೆಗಳು ಅಪ್ಪಳಿಸಿದೆ. ನೋಡ ನೋಡುತ್ತಿದ್ದಂತೆ ನಟಿ ಅಲೆಯ ರಭಸಕ್ಕೆ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಥಾಯ್ಲೆಂಡ್‌ನ ಕೊಹ್ ಸಮುಯಿ ದ್ವೀಪದಲ್ಲಿ…

Leave a Reply

Your email address will not be published. Required fields are marked *