ದಲಿತ ಯುವತಿಯನ್ನು ಪ್ರೀತಿಸಿ ಮದುವೆಯಾದ ಕುಟುಂಬಕ್ಕೆ ಬಹಿಷ್ಕಾರ | ಯುವಕನ ಕುಟುಂಬದ ಜೊತೆ ಮಾತನಾಡಿದರೆ 1000 ರೂ. ದಂಡ

ಶಿವಮೊಗ್ಗ: ದಲಿತ ಯುವತಿಯನ್ನು ಪ್ರೀತಿಸಿ, ವಿವಾಹವಾದ ಯುವಕನ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಹೊರಬೈಲು ಗ್ರಾಮದಲ್ಲಿ ನಡೆದಿದೆ. ಜೋಗಿ ಸಮುದಾಯಕ್ಕೆ ಸೇರಿದ ಯುವಕ ಮತ್ತು ದಲಿತ ಯುವತಿ ಸೆ. 10ರಂದು ವಿವಾಹವಾಗಿದ್ದಾರೆ. ಅಲ್ಲದೆ, ನ.27ರಂದು…

ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಕೊಡುವುದೆ ನಮ್ಮ ಧ್ಯೇಯ: ಡಾ. ಮುರಳಿಧರ್

ನೆಲಮಂಗಲ: ಶ್ರೀ ಮುರುಳಿ ಶಿಕ್ಷಣ ಸಂಸ್ಥೆ ಸಂಸ್ಥಾಪಕರಾದ ಮಾರಯ್ಯನವರ ಶಿಕ್ಷಣ ಪ್ರೇಮದಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರೆಯಲು ಸಹಕಾರಿಯಾಗಿದೆ ಮತ್ತು ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಕೊಡುವುದೆ ನಮ್ಮ ಧ್ಯೇಯ ಎಂದು ಶ್ರೀ ಮುರಳಿ ವಿದ್ಯಾ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಮುರುಳಿಧರ್ ಅಭಿಪ್ರಾಯ…

ದಲಿತ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ: ಕೋಲಾರದ ವಸತಿ ಶಾಲೆಯಲ್ಲಿ ಘಟನೆ

ಕೋಲಾರ: ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆಗೊಳಿಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ನಡೆದಿದ್ದು, ಅಮಾನವೀಯ ಘಟನೆ ಚರ್ಚೆಗೆ ಗ್ರಾಸವಾಗಿದೆ. ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ…

ದಲಿತರ ಮೇಲೆ ಹಲ್ಲೆ ಮಾಡಿದ್ದ 10 ಮಂದಿಗೆ ಒಂದು ವರ್ಷ ಜೈಲು

ಬೆಂಗಳೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದುಂದ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಮಾಡಿದ್ದ 10 ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ಆರೋಪಿಗಳನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆಯಾಗಿರುವ ಲಕ್ಷ್ಮಮ್ಮ ಅವರು…

ಮೋದಿ ಸರ್ಕಾರದ ಜೊತೆ ಸೇರಿ ನಾಡಿಗೆ ಅನ್ಯಾಯ ಮಾಡಿದ್ದ ಯಡಿಯೂರಪ್ಪ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು :2022-23ರಲ್ಲಿ ಕೇಂದ್ರ ಸರ್ಕಾರ ರೂ.450 ಕೋಟಿ ಅನುದಾನವನ್ನು ನಿಗದಿ ಮಾಡಿತ್ತು, ಆದರೆ ಕೊಟ್ಟಿದ್ದು ರೂ.50 ಕೋಟಿ ಮಾತ್ರ. ನಂತರ ಪ್ರಸಕ್ತ ಸಾಲಿನಲ್ಲಿ ರೂ.1350 ಕೋಟಿ ನಿಗದಿ ಮಾಡಿ, ಈ ವರೆಗೆ ಕೇವಲ ರೂ.450 ಕೋಟಿ ಬಿಡುಗಡೆ ಮಾಡಿದೆ.   ಅಂದು ಮೋದಿ…

ಟಿಕೇಟ್ ಕೊಡಿಸುವುದಾಗಿ ವಂಚನೆ – ಚೈತ್ರಾ ಮತ್ತು ತಂಡದ ವಿರುದ್ದ ಸಿಸಿಬಿ ಆರೋಪ ಪಟ್ಟಿ : 68 ಸಾಕ್ಷ್ಯಗಳ ಸಂಗ್ರಹ

ಉಡುಪಿ : ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್‌ ಕೊಡಿಸುವುದಾಗಿ ಗೋವಿಂದ ಬಾಬು ಪೂಜಾರಿ ಅವರಿಂದ ಹಣ ಪಡೆದು ವಂಚಿಸಿದ್ದ ಚೈತ್ರಾ ಮತ್ತು ತಂಡದ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು, ಮುಂದಿನ ವಾರ ಚಾರ್ಚ್‌ಶೀಟ್‌ ಸಲ್ಲಿಸಲಿದ್ದಾರೆ. ಪ್ರಕರಣದ ಸಂಬಂಧ…

ಮೋದಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? : ಸಿಎಂ ಸಿದ್ದರಾಮಯ್ಯ

ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ’ ಎಂಬ ಅಭಿಯಾನವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು,…

ಬೆಂಗಳೂರು ಗ್ರಾಮಾಂತರ: ಅಂತರರಾಷ್ಟ್ರೀಯ  ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ

ನೆಲಮಂಗಲ: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಬೆಂಗಳೂರಿನಲ್ಲಿ ಆತ್ಮಹತ್ಯೆ ಅಂತರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ(25) ಅವರು ನೇಣಿಗೆ ಶರಣಾಗಿದ್ದಾರೆ.   ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯ ಆದರ್ಶನಗರದ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.…

ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಶಿಬಿರಗಳು ಸಹಕಾರಿ

ನೆಲಮಂಗಲ: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸುವಲ್ಲಿ ಎನ್‌ಎಸ್. ಎಸ್.ಶಿಬಿರಗಳ ಸಹಕಾರಿಯಾಗಲಿವೆ ಎಂದು ಕಣೇಗೌಡನಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್‌ ಅಭಿಪ್ರಾಯಪಟ್ಟರು.ತಾಲೂಕಿನ ಕಣೇಗೌಡನಹಳ್ಳಿ ಗ್ರಾಮದ ಸರ್ಕಾರಿ ಶಾಲಾಆವರಣದಲ್ಲಿ ಸೋಮವಾರ ಸಂಜೆ ಶ್ರೀಮುರುಳಿ ಪದವಿಪೂರ್ವ ಕಾಲೇಜು ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರಕ್ಕೆ…

‘ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆʼ -ಪುನೀತ್ ಕೆರೆಹಳ್ಳಿ

”ರಾಜ್ಯ ಸರಕಾರ ನನ್ನ ಮನವಿ ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಹೇಳಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು…