ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ರಾಜಧಾನಿಗೆ ಬಂದಿರುವ ರಾಹುಲ್ ಗಾಂಧಿ ಅವರು ಸೋಮವಾರ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡಿರುವುದು ಗಮನ ಸೆಳೆದಿದೆ.
ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ನಿನ್ನೆ(ಮೇ 7) ಬೆಂಗಳೂರಿನಲ್ಲಿ ರೋಡ್ ಶೋದಲ್ಲಿ ಪಾಲ್ಗೊಂಡು ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ನಗರದ ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯೊಂದರಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದಿದ್ದಾರೆ. ಬಳಿಕ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡಿದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಪ್ರಯಾಣಿಕರೊಂದಿಗೆ ಸಮಾಲೋಚನೆ ನಡೆಸಿದರು.
ಅವರ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
Good