ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಹೀನಾಯ ಸೋಲು ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಲಿದ್ದಾರೆ.
ಹಾವೇರಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರಿಗೆ ಆಗಮಿಸಿದ ಕೂಡಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಲಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದು, ನೂತನ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸುವ ವರೆಗೆ ಬಸವರಾಜ ಬೊಮ್ಮಾಯಿ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.