ಮಧ್ಯಪ್ರದೇಶ: ಇಬ್ಬರು ದಲಿತ ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ, ಅವರಿಗೆ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಅವಮಾನಕರವಾದ ಘಟನೆಯೊಂದು ಬೆಳಕಿಗೆ ಬಂದಿದೆ.
ಹೌದು, ಮಧ್ಯಪ್ರದೇಶದಲ್ಲಿ ಮೊನ್ನೆ ಮೊನ್ನೆ ತಾನೆ ಬಿಜೆಪಿ ಕಾರ್ಯಕರ್ತನೊಬ್ಬ ಬುಡಕಟ್ಟು ಜನಾಂಗದ ವ್ಯಕ್ತಿ ಮೇಲೆ ಮಾತ್ರ ಮಾಡಿ ಭಾರೀ ಹಿಂಸಿಸೆದ್ದು, ದೇಶಾದ್ಯಂತ ಭಾರೀ ಸುದ್ಧಿಯಾಗಿತ್ತು. ಆದರೀಗ ಈ ಘಟನೆ ಮಾಸುವ ಮುನ್ನವೇ ಇದೇ ಮಧ್ಯಪ್ರದೇಶದ ಶಿವಪುರಿಯಲ್ಲಿ ಮುಸ್ಲಿಂ ಯುವತಿಯೊಂದಿಗೆ ಮಾತನಾಡಿದ್ದಕ್ಕಾಗಿ, ಅನುಚಿತ ವರ್ತನೆ ತೋರಿದ್ದಾರೆಂದು ಸುಳ್ಳು ಆರೋಪ ಹೊರಿಸಿ, ಅವರಿಗೆ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಅವಮಾನಕರವಾದ ಘಟನೆಯೊಂದು ಬೆಳಕಿಗೆ ಬಂದಿದೆ. ಆದರೆ ಈ ಘಟನೆಯು ಜೂನ್ 30ರಂದು ನಡೆದಿದ್ಧು, ಇದೀಗಿ ವಿಡಿಯೋ ವೈರಲ್ ಆದ ನಂತರ ಬೆಳಕಿಗೆ ಬಂದಿದೆ.
ಅಂದಹಾಗೆ 23 ಮತ್ತು 24 ವರ್ಷದ ಇಬ್ಬರು ಯುವಕರ ಮೇಲೆ ಈ ಅಮಾನವೀಯ ಕೃತ್ಯ ಎಸಗಲಾಗಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಸದ್ಯ ಒಂದೇ ಕುಟುಂಬದ ಅಜ್ಮತ್ ಖಾನ್, ವಕೀಲ್ ಖಾನ್, ಆರಿಫ್ ಖಾನ್, ಶಾಹಿದ್ ಖಾನ್, ಇಸ್ಲಾಂ ಖಾನ್, ರಹೀಶಾ ಬಾನೋ ಮತ್ತು ಸೈನಾ ಬಾನೊ ಎಂಬ ಏಳು ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಹೇಳಲಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ(SP) ರಘುವಂಶ್ ಸಿಂಗ್ ಭಡೋರಿಯಾ ಮಾತನಾಡಿ ’23 ಮತ್ತು 24 ವರ್ಷದ ಇಬ್ಬರು ಯುವಕರು ಆರೋಪಿಯ ಕುಟುಂಬದ 26 ವರ್ಷದ ಯುವತಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು ಎಂದು ವರದಿಯಾಗಿದೆ. ಈ ವಿಷಯ ತಿಳಿದ ಮನೆಯವರು ಯುವತಿಯನ್ನು ವರ್ಖಾಡಿ ಗ್ರಾಮದಲ್ಲಿರುವ ಇಬ್ಬರನ್ನು ತಮ್ಮ ಮನೆಗೆ ಕರೆ ತರುವಂತೆ ತಿಳಿಸಿದ್ದಾರೆ. ಜೂನ್ 30 ರಂದು ಇಬ್ಬರು ಬಂದಾಗ ಮನೆಯವರು ಅಮಾನುಷವಾಗಿ ಥಳಿಸಿದ್ದಾರೆ. ಆರೋಪಿಗಳು ದಲಿತರ ಮುಖಕ್ಕೆ ಕಪ್ಪು ಬಣ್ಣ ಬಳಿದು, ಮಲವನ್ನು ತಿನ್ನುವಂತೆ ಒತ್ತಾಯಿಸಿದ್ದಾರೆ. ಅವರಿಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ” ಎಂದು ಹೇಳಿದ್ದಾರೆ.
ಇನ್ನು ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ಅಡಿ ಪ್ರಕರಣ ದಾಖಲಿಸಲು ಮತ್ತು ಅವರು ಅಕ್ರಮವಾಗಿ ನಿರ್ಮಿಸಿದ ಆಸ್ತಿಗಳನ್ನು ಕೆಡವಲು ಶಿವಪುರಿ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಲಾಗಿದೆ” ಎಂದು ಅವರು ಹೇಳಿದರು. ಮಧ್ಯಪ್ರದೇಶ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಬೆನ್ನಲ್ಲೇ ಮಲ ತಿನ್ನಿಸಿದ ಘಟನೆ ವರದಿಯಾಗಿದೆ.
ಮಹಿಳೆಗೆ ಕಿರುಕುಳ ನೀಡಿದ್ದಕ್ಕಾಗಿ ಮತ್ತು ಅನುಚಿತವಾಗಿ ಸ್ಪರ್ಶಿಸಿದ್ದಕ್ಕಾಗಿ ಇಬ್ಬರು ಯುವಕರನ್ನು ಥಳಿಸಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ. ತನಿಖೆಯ ಸಂದರ್ಭದಲ್ಲಿ ಕುಟುಂಬದವರ ಹೇಳಿಕೆಗಳು ಸುಳ್ಳು ಎಂದು ಕಂಡುಬಂದಿದೆ. ಮಧ್ಯಪ್ರದೇಶ ಸ್ಥಳೀಯ ಪೊಲೀಸರ ತನಿಖೆಯ ನಂತರ ಯುವಕರ ಮೇಲಿರುವ ಲೈಂಗಿಕ ದೌರ್ಜನ್ಯದ ಆರೋಪಗಳು ಆಧಾರ ರಹಿತವೆಂದು ದೃಢಪಡಿಸಿವೆ. ಆಸ್ತಿ ಸಂಬಂಧಿತ ವಿವಾದಕ್ಕೆ ಆರೋಪಿಗಳು ಹೀಗೆ ಮಾಡಿದ್ದಾರೆ ಎಂಬುದು ತಿಳಿದು ಬಂದಿದೆ. ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಘಟನೆಯನ್ನು ಖಂಡಿಸಿದ್ದಾರೆ.