ಬೆಂಗಳೂರು: ನಿಲ್ಲಿಸಿದ್ದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಊದ್ಯಾನ್ ಎಕ್ಸ್ಪ್ರೆಸ್ ರೈಲು ಮುಂಬೈಯಿಂದ ಇಂದು ಬೆಳಗ್ಗೆ 6 ಗಂಟೆಗೆ ಕೆಎಸ್‌ಆರ್ ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಫಾಟ್ ಫಾರ್ಮ್ 4ರಲ್ಲಿ ನಿಂತಿತ್ತು. 7:30ರ ಸುಮಾರಿಗೆ ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ರೈಲಿನ ಎರಡು ಕೋಚ್ಗಳಿಗೆ ಆವರಿಸಿದೆ. ಈ ವೇಳೇ ರೈಲಿನಲ್ಲಿ ಪ್ರಯಾಣಿಕರು ಯಾರೂ ಇಲ್ಲದಿದ್ದ ಕಾರಣ ಸಾಂಭವ್ಯ ಅಪಾಯ ತಪ್ಪಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಬೆಂಕಿ ತಗುಲಿರುವ ಬೋಗಿಗಳನ್ನು ಬೇರ್ಪಡಿಸಲಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.