ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ವಿಶ್ವವಿದ್ಯಾಲಯಗಳಲ್ಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‌ನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿವಿಗಳ ಕುಲಪತಿಗಳು ಮತ್ತು ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಎಸ್.ಪಿ.ಎಸ್.ಪಿ., ಟಿ.ಎಸ್.ಪಿ. ಅಡಿ ಲ್ಯಾಪ್ ಟಾಪ್ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ. ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ಸಭೆಯಲ್ಲಿ ಸಿಎಂ ಸೂಚಿಸಿದ್ದಾರೆ.
ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.
ಇದೇ ವೇಳೆ ರಾಜ್ಯದ ವಿವಿಗಳಲ್ಲಿ ಮಂಜೂರಾದ ಶೇ. 50 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದೆ. ವಿಶ್ವವಿದ್ಯಾಲಯಗಳ ಸಂಪನ್ಮೂಲದಿಂದಲೇ 2865 ಅತಿಥಿ ಉಪನ್ಯಾಸಕರಿಗೆ ವೇತನ ಭರಿಸಲಾಗುತ್ತಿದ್ದು, ಅವರಿಗೆ ಆರ್ಥಿಕ ಸಮಸ್ಯೆಯಾಗುತ್ತಿದೆ ಎಂದು ಕುಲಪತಿಗಳು ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದಾರೆ .