ಫ್ಯಾಕ್ಟ್‌ಚೆಕ್ : ಪ್ರಧಾನಿ ನರೇಂದ್ರ ಮೋದಿ ಹೇಳಿದ ಮತ್ತೊಂದು ಸುಳ್ಳು ಯಾವುದು ಗೊತ್ತೇ?

ಚಿಕಿತ್ಸೆಗಾಗಿ ಈಗ ಜನರು ನೂರಾರು ಕಿ.ಮೀ. ಓಡಾಡಬೇಕಾಗಿಲ್ಲ. ‘ಆರೋಗ್ಯದ ಆರೈಕೆಯ ದೃಷ್ಟಿಯಿಂದ ನಾವು ಅಸ್ಸಾಂನ ಗುವಹಾಟಿಯಿಂದ ಪಶ್ಚಿಮ ಬಂಗಾಳದ ಕಲ್ಯಾಣಿವರೆಗೆ, ಜಾರ್ಖಂಡ್‌ನ ದೇವಧರದಿಂದ ಬಿಹಾರದ ದರ್ಭಂಗಾದವರೆಗೆ ಎಮ್ಸ್‌ ಆಸ್ಪತ್ರೆಯನ್ನು ತೆರೆದಿದ್ದೇವೆ. ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆ.12ರಂದು ಪಶ್ಚಿಮ ಬಂಗಾಳದಲ್ಲಿ ನಡೆದ ಪಂಚಾಯತ್‌ ರಾಜ್‌ ಪರಿಷತ್‌ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಹಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದಂತೆ ಬಿಹಾರದ ದರ್ಬಾಂಗದಲ್ಲಿ ಏಮ್ಸ್ ಸ್ಥಾಪಿಸಿದ್ದೇವೆ ಎಂಬುದು ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಪ್ರಧಾನಿ ಮೋದಿ ಪಶ್ಚಿಮ ಬಂಗಾಳದ ಕಾರ್ಯಕ್ರಮದಲ್ಲಿ ಮಾತನಾಡುತ್ತ ಯಾವ ಯಾವ ರಾಜ್ಯದಲ್ಲಿ ಏಮ್ಸ್‌ಅನ್ನು ಸ್ಥಾಪಿಸಿದ್ದೇವೆ ಎಂದು ಹೇಳುತ್ತಾ, ಬಿಹಾರದ ದರ್ಬಾಂಗದಲ್ಲಿ ಏಮ್ಸ್ ಸ್ಥಾಪಿಸಿದ್ದೇವೆ ಎಂದು ಸುಳ್ಳು ಹೇಳಿದ್ದಾರೆ ಎಂದು ಬೂಮ್ ಫ್ಯಾಕ್ಟ್‌ಚೆಕ್ ವರದಿ ಮಾಡಿದೆ.

‘ಏಮ್ಸ್‌ ನಿರ್ಮಾಣಕ್ಕಾಗಿ ಬಿಹಾರ ಸರ್ಕಾರ ಗೊತ್ತು ಮಾಡಿದ್ದ ಭೂಮಿಯ ಪ್ರಸ್ತಾವವನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ’ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್‌ ಮೋದಿ ಅವರು ಹೇಳಿದ್ದರು. ಭೂಮಿಯ ಪ್ರಸ್ತಾವವನ್ನು ಕೇಂದ್ರ ಸರ್ಕಾರ ನಿರಾಕರಿಸಿ ಬರೆದಿದ್ದ ಪತ್ರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಅವರು 2023ರ ಮೇ 26ರಂದು ದೃಢಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಬಿಹಾರದ ದರ್ಬಾಂಗದಲ್ಲಿ ಏಮ್ಸ್ ಸ್ಥಾಪಿಸಿದ್ದೇವೆ ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳಿದ್ದಾರೆ ಎಂದು ಸ್ಪಷ್ಟವಾಗಿದೆ.

Related Posts

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲ : ಗುಜರಾತ್ ಬಿಜೆಪಿ ಸರ್ಕಾರ 

ಆತ್ಮೀಯರೇ,  ಇದ್ದಕ್ಕಿದ್ದಂತೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅಪ್ಪಿಕೊಳ್ಳಲು ಹೊರಟಿರುವ ಸಂಘಿಗಳು ಏನೇ ನಾಟಕವಾಡಿದರೂ….  ಅವರ ಸಂವಿಧಾನ ದ್ವೇಷ ಮತ್ತು ಅಂಬೇಡ್ಕರ್ ದ್ವೇಷವನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ….   ಅದರ ಮತ್ತೊಂದು ಉದಾಹರಣೆ ಇಲ್ಲಿದೆ…   ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ…

Leave a Reply

Your email address will not be published. Required fields are marked *