ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದರೂ ದಲಿತರಿಗೆ ದೇಗುಲಗಳಲ್ಲಿ ಕಾಲಿರಿಸಲು ಅವಕಾಶವಿಲ್ಲ : ಸಿಎಂ ಸಿದ್ದರಾಮಯ್ಯ…

ಕೋಲಾರ : ಕೋಲಾರದಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಅವರು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಎರಡು ಕಡೆಗಳಲ್ಲಿ ಮರ್ಯಾದಾಹತ್ಯೆಗಳು ನಡೆದಿದೆ. ಇದು ನಮ್ಮೆಲ್ಲರ ಮನಕಲುಕುವಂತೆ ಮಾಡಿದೆ. ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ ಮತ್ತು ಸಾಮಾಜಿಕ ಕಟ್ಟುಪಾಡುಗಳು ಇಂತಹ ಕ್ರೌರ್ಯಗಳನ್ನು ಪ್ರೇರೇಪಿಸುತ್ತದೆ. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ಕಾನೂನುಬದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಪ್ರಕರಣದ ತನಿಖೆ, ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿದ್ದಾರೆ.

ಕೋಲಾರದ ತೊಟ್ಲಿ ಗ್ರಾಮದಲ್ಲಿ ವರಮಹಾಲಕ್ಷ್ಮಿ ಹಬ್ಬದ ದಿನವೇ ವೆಂಕಟೇಶ್ ಗೌಡ ಎಂಬುವವರ 19 ವರ್ಷ ವಯಸ್ಸಿನ ಮಗಳು ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದಳು ಎಂಬ ಕಾರಣಕ್ಕೆ ತಂದೆಯೇ ಮಗಳನ್ನು ದಾರುಣವಾಗಿ ಹತ್ಯೆ ಮಾಡಿದರು. ರಾಜ್ಯದಲ್ಲಿ ಇತ್ತೀಚೆಗೆ ಎರಡು ಕಡೆ ಇಂತಹ ಮರ್ಯಾದೆಗೇಡು ಹತ್ಯೆಗಳು ನಡೆದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿದ್ದಾರೆ. ಇಂತಹ ಮನಸ್ಥಿತಿಯನ್ನು ಸೃಷ್ಡಿಸಿರುವ ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿ ಮೂಡಿಸುವ ಅವಶ್ಯಕತೆ ಇದೆ.

ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದರೂ ದಲಿತರಿಗೆ ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಕಾಲಿರಿಸುವ ಅವಕಾಶ ನೀಡದ ಆಚರಣೆಗಳು ಸಂಪ್ರದಾಯಗಳು ನಮ್ಮಲಿವೆ. ಜಾತಿ ಸಂರಕ್ಷಣೆಯ ಕಟ್ಟುಪಾಡುಗಳನ್ನು ಮೀರಲು ಅಮಾನವೀಯತೆ, ವೈಚಾರಿಕತೆಯೇ ದಾರಿ. ಜಾಗೃತಿಯೇ ಅಸ್ತ್ರ. ಸಮಾಜವನ್ನು ಜಾತಿ ಸಂಕೋಲೆಗಳಿಂದ ವಿಮುಕ್ತಗೊಳಿಸಲು ಪ್ರಯತ್ನಿಸದ ಎಲ್ಲಾ ಸಮಾಜ ಸುಧಾರಕರ ಆಶಯಗಳನ್ನು ವ್ಯಾಪಕವಾಗಿ ಪ್ರಚುರಪಡಿಸುವುದು ಅಗತ್ಯ. ಈ ದಿಕ್ಕಿನಲ್ಲಿ ಸರ್ಕಾರವು ರಚನಾತ್ಮಕ ಕಾರ್ಯಕ್ರಮಗಳಿಗೆ ಮುಂದಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಕೋಲಾರದಲ್ಲಿ ಅನ್ಯಜಾತಿ ಯುವಕನನ್ನು ಪ್ರೀತಿಸಿದಕ್ಕಾಗಿ ತಂದೆ ಹೆತ್ತ ಮಗಳನ್ನೇ ಕತ್ತು ಹಿಚುಕಿ ಹತ್ಯೆ ಮಾಡಿದ್ದರು. ಘಟನೆಗೆ ಸಂಬಂಧಿಸಿದಂತೆ ತಂದೆ ವೆಂಕಟೇಶ್ ಗೌಡ, ಅಣ್ಣ ಮೋಹನ್ ಕುಮಾರ್, ಚಿಕ್ಕಪ್ಪ ಚೌಡೇಗೌಡರನ್ನು ಕೋಲಾರ ಗ್ರಾಮಾಂತರ ಪೋಲಿಸರು ಬಂಧಿಸಿದ್ದಾರೆ.

https://twitter.com/CMofKarnataka/status/1696374144638787761?s=20

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

Leave a Reply

Your email address will not be published. Required fields are marked *