ಎಲ್ಲಾ ಶಾಲೆಗಳಲ್ಲಿ ‘ಸಂವಿಧಾನ ಪೀಠಿಕೆ’ ಓದು ಕಡ್ಡಾಯ : ಸೆ.15 ರಂದು 10 ಸಾವಿರ ಜನರಿಂದ ಪೀಠಿಕೆ ಓದು

ಬೆಂಗಳೂರು: ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದು ಹಾಗೂ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗುವುದು, ಸಾಂವಿಧಾನಿಕ ತತ್ತ್ವಗಳನ್ನು ತಮ್ಮ ಜೀವನ ಹಾಗೂ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆಗೈಯುವುದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. 

  ಉಲ್ಲೇಖಿತ (4) ರ ಆದೇಶದಲ್ಲಿ, ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಮಂತ್ರಾಲಯ ವಿಧಾಯಿ ಇಲಾಖೆ ಪ್ರಕಟಿಸಿರುವ ಸಂವಿಧಾನ ಪೀಠಿಕೆಯ ಕನ್ನಡ ಮತ್ತು ಆಂಗ್ಲ ಭಾಷೆಯ ಆವೃತ್ತಿಯನ್ನು ಬಳಸಿಕೊಳ್ಳುವ ಸಂಬಂಧ ಪೀಠಿಕೆ ಮಾದರಿಯನ್ನು ನೀಡಲಾಗಿದೆ. ಉಲ್ಲೇಖಿತ (2) ರ ಈ ಕಛೇರಿಯ ಸುತ್ತೋಲೆಯಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ವಿದ್ಯಾರ್ಥಿಗಳು ಪ್ರತಿ ದಿನ ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಓದುವ ಕುರಿತು ಅಗತ್ಯ ಕ್ರಮವಹಿಸಲು ಸೂಚಿಸಲಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಯವರು, ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳು ಅಂತರರಾಷ್ಟ್ರೀಯ ಪ್ರಜಾಪುಭುತ್ವ ದಿನಾಚರಣೆ ಅಂಗವಾಗಿ ದಿನಾಂಕ:15.09.2023 ರಂದು ಬೆಳಿಗ್ಗೆ 10.00 ಗಂಟೆಗೆ ವಿಧಾನ ಸೌಧದ ಮುಂಭಾಗದ ವಿಶಾಲವಾದ ಮೆಟ್ಟಿಲುಗಳು ಮತ್ತು ಪ್ರದೇಶದಲ್ಲಿ 10,000 ವಿದ್ಯಾರ್ಥಿಗಳೊಡನೆ ಭಾರತದ ಸಂವಿಧಾನ ಪೀಠಿಕೆಯನ್ನು ಓದಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

  ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಸೇರಿದಂತೆ ಎಲ್ಲಾ ಶಾಲಾ-ಕಾಲೇಜುಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಕಡ್ಡಾಯವಾಗಿ ಓದಬೇಕು ಮತ್ತು ಎಲ್ಲಾ ಸರ್ಕಾರಿ ಕಚೇರಿ, ಇಲಾಖೆಗಳಲ್ಲೂ ಸಂವಿಧಾನದ ಪೀಠಿಕೆಯ ಫೋಟೋ ಹಾಕಲು ಜೂನ್ 15 ರಂದು ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತ್ತು. 

  ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆಯ ಭಾವಚಿತ್ರವನ್ನು ಹಾಕುವುದನ್ನು ಕಡ್ಡಾಯಗೊಳಿಸಲಾಗಿತ್ತು.

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲ : ಗುಜರಾತ್ ಬಿಜೆಪಿ ಸರ್ಕಾರ 

ಆತ್ಮೀಯರೇ,  ಇದ್ದಕ್ಕಿದ್ದಂತೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅಪ್ಪಿಕೊಳ್ಳಲು ಹೊರಟಿರುವ ಸಂಘಿಗಳು ಏನೇ ನಾಟಕವಾಡಿದರೂ….  ಅವರ ಸಂವಿಧಾನ ದ್ವೇಷ ಮತ್ತು ಅಂಬೇಡ್ಕರ್ ದ್ವೇಷವನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ….   ಅದರ ಮತ್ತೊಂದು ಉದಾಹರಣೆ ಇಲ್ಲಿದೆ…   ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ…

Leave a Reply

Your email address will not be published. Required fields are marked *