ಮಂಗಳೂರು: ಜಾಗದ ವಿಚಾರವಾಗಿ ಬಜರಂಗದಳ ಮುಖಂಡ ಮತ್ತು ತಂಡ ಅಂಗಡಿಗೆ ನುಗ್ಗಿ ನಾಲ್ವರ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಜಿನ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ.
ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ನಾಲ್ವರ ಮೇಲೆ ಹಲ್ಲೆಗೈದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಜರಂಗದಳ ಮುಖಂಡ, ರೌಡಿಶೀಟರ್ ಭರತ್ ಕುಮ್ಡೇಲು, ಬಜರಂಗದಳದ ಜಗಜೀವನ್ ರೈ, ಭವಿಷ್, ಸಂದೀಪ್ ಎಂಬವರು ಅಂಗಡಿಗೆ ನುಗ್ಗಿ ಹರೀಶ ನಾಯ್ಕ, ಸುದರ್ಶನ್ ಕುಮಾರ್, ರಮಾನಂದ ಎಂಬವರನ್ನು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಅಂಗಡಿಯ ಒಳಗಿದ್ದವರನ್ನು ಹೊರಗೆಳೆದು ನಡುರಸ್ತೆಯಲ್ಲಿ ಹಲ್ಲೆಗೈದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವವರ ಮೇಲಿನ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಭರತ್ ಕುಮ್ಡೇಲು ಕಲ್ಲಡ್ಕದ ಬಜರಂಗದಳ ಮುಖಂಡನಾಗಿದ್ದು ಆತನ ವಿರುದ್ಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. 2017ರಲ್ಲಿ ನಡೆದ ಎಸ್.ಡಿ.ಪಿ.ಐ. ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ.