ನೆಲಮಂಗಲ: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಬೆಂಗಳೂರಿನಲ್ಲಿ ಆತ್ಮಹತ್ಯೆ ಅಂತರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ(25) ಅವರು ನೇಣಿಗೆ ಶರಣಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯ ಆದರ್ಶನಗರದ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆಗಿದ್ದ ಅವರು ಮೊನ್ನೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಮನೆಗೆ ವಾಪಸ್ಸು ಬಂದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .
ಅಂತರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀ, ಕಾಡುಗೋಡಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಧನಲಕ್ಷ್ಮಿ ಅವರ ಆತ್ಮಹತ್ಯೆ ಬಗ್ಗೆ ನೆಲಮಂಗಲ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.