ದಲಿತರ ಮೇಲೆ ಹಲ್ಲೆ ಮಾಡಿದ್ದ 10 ಮಂದಿಗೆ ಒಂದು ವರ್ಷ ಜೈಲು

ಬೆಂಗಳೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದುಂದ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಮಾಡಿದ್ದ 10 ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.

ಆರೋಪಿಗಳನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆಯಾಗಿರುವ ಲಕ್ಷ್ಮಮ್ಮ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ಕೆ.ಎಂ.ಖಾಜೀ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ. ಎಲ್ಲ ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 3 ಸಾವಿರ ರೂ. ದಂಡ ವಿಧಿಸಲಾಗಿದೆ. ಜೊತೆಗೆ, ಐಪಿಸಿ ಹಲವು ಸೆಕ್ಷನ್‌ಗಳಡಿ ಶಿಕ್ಷೆ ವಿಧಿಸಿ, ಒಟ್ಟು 85 ಸಾವಿರ ರೂ. ದಂಡ ಹಾಕಲಾಗಿದೆ.

ಆದರೆ, ಪ್ರಕರಣದ 8ನೇ ಆರೋಪಿ ಶಿವಲಿಂಗಯ್ಯ ಎಂಬುವರು ಮೃತಪಟ್ಟಿರುವುದರಿಂದ ಅವರ ವಿರುದ್ಧದ ಪ್ರಕರಣ ಹಿಂಪಡೆಯಲಾಗಿದೆ. ಸಿವಿಲ್ ಪ್ರಕರಣವೊಂದರಲ್ಲಿ ಆರೋಪಿಗಳಲ್ಲಿ ಒಬ್ಬರಾಗಿರುವ ಸುದೀಪ್ ಎಂಬುವರ ವಿರುದ್ಧ ಸಂತ್ರಸ್ತೆ ಲಕ್ಷ್ಮಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದ ಸಿಟ್ಟಾಗಿದ್ದ ಸವರ್ಣೀಯರು 2008ರ ಆ. 14ರಂದು ದಲಿತರ ಕಾಲೋನಿಗೆ ನುಗ್ಗಿ ಜಾತಿ ನಿಂದನೆ ಮಾಡಿ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದರು.

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಪುಷ್ಪ 2 ಚಿತ್ರ ಬಾಯ್ ಕಟ್ ಗೆ ಕರವೆ ಕರೆ : ಶಂಕರ್ ಗೌಡ

ಬೆಂಗಳೂರು: ಪುಷ್ಪ 2 ಚಿತ್ರವು ಇದೆ ತಿಂಗಳ 05 ನೇ ತಾರೀಖು ಬಿಡುಗಡೆಗೊಳ್ಳುಲ್ಲು ಸಜ್ಜಾಗಿದ್ದು ಚಿತ್ರಕ್ಕೆ ಈಗ ಬಾಯ್ ಕಟ್ ಅಭಿಯಾನದ ಬಿಸಿ ಮುಟ್ಟಿದೆ. ಕರ್ನಾಟಕದಲ್ಲಿ ಕನ್ನಡಿಗರೆ ಸಾರ್ವಭೌಮ ಕನ್ನಡ ಚಿತ್ರಗಳಿಗೆ ಹೆಚ್ಚು ಚಿತ್ರಮಂದಿರಗಳನ್ನು ಕೊಡಬೇಕು ಎಂದು ತಿಳಿಸಿದ್ದಾರೆ. ಹಾಗೇಯೆ ಪುಷ್ಪ…

Leave a Reply

Your email address will not be published. Required fields are marked *