ದಲಿತ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ: ಕೋಲಾರದ ವಸತಿ ಶಾಲೆಯಲ್ಲಿ ಘಟನೆ

ಕೋಲಾರ: ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆಗೊಳಿಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ನಡೆದಿದ್ದು, ಅಮಾನವೀಯ ಘಟನೆ ಚರ್ಚೆಗೆ ಗ್ರಾಸವಾಗಿದೆ.

ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯಲ್ಲಿ 6ರಿಂದ 10ನೇ ತರಗತಿಯ 250 ಮಕ್ಕಳು ಓದುತ್ತಿದ್ದರು. ಕೆಲ ಮಕ್ಕಳನ್ನು ಶೌಚ ಗುಂಡಿಯೊಳಗೆ ಇಳಿಸಿ ಸ್ವಚ್ಛತಾ ಕಾರ್ಯವನ್ನು ನಡೆಲಾಗಿದೆ. ಪ್ರಾಂಶುಪಾಲರು ಹಾಗೂ ಶಿಕ್ಷಕರೊಬ್ಬರ ಸಮ್ಮುಖದಲ್ಲಿ 7-9ನೇ ತರಗತಿಯ ಐದಾರು ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿರುವ ಆರೋಪ ಕೇಳಿ ಬಂದಿದೆ.

ನಾವು ಐದಾರು ಮಂದಿ ಇದ್ದೆವು. ಶೌಚ ಗುಂಡಿಗೆ ಇಳಿಸಿ ಕಸ ತೆಗೆಸಿದರು. ನಾವು ಬಕೆಟ್‌ಗಳಲ್ಲಿ ಕಸ ತುಂಬಿ ಕೊಟ್ಟೆವು. ಕೆಲವರು ಮೇಲಿಂದ ನೀರು ಹಾಕಿದರು. ಇಲ್ಲಿ ವಿಪರೀತ ಹಿಂಸೆ ಕೊಡುತ್ತಾರೆ. ನಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಮಕ್ಕಳು ಆರೋಪಿಸಿದ್ದಾರೆ. ಮಕ್ಕಳು ಶೌಚ ಗುಂಡಿಯೊಳಗಿರುವ ಫೋಟೊಗಳನ್ನು  ಮೊಬೈಲ್ ಫೋನ್‌ನಲ್ಲಿ ಸೆರೆ ಹಿಡಿಯಲಾಗಿದೆ. ಇದೀಗ ಪೋಟೋಗಳು ಭಾರೀ ವೈರಲ್‌ ಆಗಿದೆ.

ಇದಲ್ಲದೆ ಮಕ್ಕಳಿಗೆ ವಸತಿ ನಿಲಯದಲ್ಲಿ ಚಿತ್ರಹಿಂಸೆ ನೀಡುವ ವಿಡಿಯೋಗಳು ಕೂಡ ವೈರಲ್‌ ಆಗಿದೆ. ರಾತ್ರಿ ಲೈಟ್ ಆಫ್ ಮಾಡಿ ಬ್ಯಾಗ್ ಸಮೇತ ಹಾಸ್ಟೆಲ್ ಹೊರಗಡೆ ಮಂಡಿಯೂರಿ ಕೂರಿಸಿ ಶಿಕ್ಷೆ ಕೊಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮಕ್ಕಳ ಕೈಯ್ಯಲ್ಲಿ ಶೌಚಾಲಯ ಸ್ವಚ್ಛತೆ ಮಾಡಿಸಿರುವುದು ಅಬಾಲಿಶನ್ ಆಫ್ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಆ್ಯಕ್ಟ್-1993ರ ಉಲ್ಲಂಘನೆ ಆಗಿದೆ. ಆದರೆ ಸ್ವಚ್ಛತಾ ಅಂದೋಲನದ ಭಾಗವಾಗಿ ಚೇಂಬರ್ ಒಳಗೆ ಇಳಿಸಿ ಸ್ವಚ್ಛಗೊಳಿಸಲಾಗಿದೆ. ಅದು ಮಲದ ಗುಂಡಿ ಅಲ್ಲ ಎಂದು ಶಿಕ್ಷಕರು ಹೇಳುತ್ತಿದ್ದಾರೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು,  ವಿಚಾರ ತಿಳಿದು  ವಸತಿ ನಿಲಯಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇನೆ. ಮಕ್ಕಳನ್ನು ಈ ರೀತಿಯ ಕೆಲಸಕ್ಕೆ ಬಳಸಿಕೊಂಡಿರುವುದು ತಪ್ಪು. ಈ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ವರದಿ ನೀಡಿದ್ದೇನೆ. ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಾರದ ಆರ್.ಶ್ರೀನಿವಾಸ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ನಾವು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ್ದೇವೆ. ಮಕ್ಕಳಲ್ಲಿ ಈ ರೀತಿಯ ಕೆಲಸ ಇನ್ನು ಮಾಡಿಸಬಾರದು ಎಂದು  ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಸೂಚನೆ ನೀಡಿದ್ದೇನೆ. ಮಕ್ಕಳನ್ನು ಛೇಂಬರ್ ಒಳಗೆ ಇಳಿಸಿದವರು ಮತ್ತು ಮಕ್ಕಳಿಗೆ ರಾತ್ರಿ ವೇಳೆ ಹಿಂಸೆ ನೀಡಿರುವ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಿದ್ದಾರೆ.

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಪುಷ್ಪ 2 ಚಿತ್ರ ಬಾಯ್ ಕಟ್ ಗೆ ಕರವೆ ಕರೆ : ಶಂಕರ್ ಗೌಡ

ಬೆಂಗಳೂರು: ಪುಷ್ಪ 2 ಚಿತ್ರವು ಇದೆ ತಿಂಗಳ 05 ನೇ ತಾರೀಖು ಬಿಡುಗಡೆಗೊಳ್ಳುಲ್ಲು ಸಜ್ಜಾಗಿದ್ದು ಚಿತ್ರಕ್ಕೆ ಈಗ ಬಾಯ್ ಕಟ್ ಅಭಿಯಾನದ ಬಿಸಿ ಮುಟ್ಟಿದೆ. ಕರ್ನಾಟಕದಲ್ಲಿ ಕನ್ನಡಿಗರೆ ಸಾರ್ವಭೌಮ ಕನ್ನಡ ಚಿತ್ರಗಳಿಗೆ ಹೆಚ್ಚು ಚಿತ್ರಮಂದಿರಗಳನ್ನು ಕೊಡಬೇಕು ಎಂದು ತಿಳಿಸಿದ್ದಾರೆ. ಹಾಗೇಯೆ ಪುಷ್ಪ…

Leave a Reply

Your email address will not be published. Required fields are marked *