ನಾಗಮಂಗಲ ಗಲಭೆ ಘಟನೆ ಬಗ್ಗೆ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಪ್ರತಿಕ್ರಿಯೆ!

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಬುಧವಾರ ಸಂಜೆ ನಡೆದ ಕಲ್ಲು ತೂರಾಟ ಹಾಗೂ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಎಸ್​​​ಪಿ ಮಲ್ಲಿಕಾರ್ಜುನ ಬಾಲದಂಡಿ ತನಿಕೆ ನ್ಯೂಸ್‌ ಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಾಗಮಂಗಲ ಗಲಭೆ ಸಂಬಂಧ ಮಂಡ್ಯ ಎಸ್​​​ಪಿ ಮಲ್ಲಿಕಾರ್ಜುನ ಬಾಲದಂಡಿ ಪ್ರತಿಕ್ರಿಯೆ ನೀಡಿದ್ದು, ಇದುವರೆಗೂ ಘಟನೆ ಸಂಬಂಧ 46 ಜನರನ್ನ ವಶಕ್ಕೆ ಪಡೆದಿದ್ದೇವೆ. ಕೆಲವು ಸಿಸಿಟಿವಿ ಕ್ಯಾಮರಾ ಪರಿಶೀಲನೆ ಕೂಡ ಮಾಡುತ್ತಿದ್ದೇವೆ. ಸದ್ಯಕ್ಕೆ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದಿದ್ದಾರೆ.

ಮೆರವಣಿಗೆಗೆ ಅನುಮತಿ ನೀಡಿದ್ದೆವು. ನಾವು ಭದ್ರತೆ ಕೂಡ ಕಲ್ಪಿಸಿದ್ದೆವು. ಮಸೀದಿ ಬಳಿ ಮೂರ್ತಿ ನಿಲ್ಲಿಸಿ ಸಮಯ ಕಳೆಯುತ್ತಿದ್ದರು. ಹೀಗಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಎರಡೂ ಕಡೆಯವರು ಕಲ್ಲು ತೂರಾಟ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

Related Posts

ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಮಳೆ: ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ,…

Leave a Reply

Your email address will not be published. Required fields are marked *