ಚುನಾವಣಾ ಬಾಂಡ್ ಮೂಲಕ 279 ಕೋಟಿ ಸುಲಿಗೆ : ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಿ ಎಂದ ಕೋರ್ಟ್

ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸುವಂತೆ 42ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. 

 ಜನಾಧಿಕಾರ ಸಂಘರ್ಷ ಪರಷತ್‌ನ ಆದರ್ಶ ಆರ್. ಐಯ್ಯ‌ರ್ ದೂರು ನೀಡಿದ್ದರು. ಈ ದೂರಿನ ಮೇರೆಗೆ ಶುಕ್ರವಾರ ನ್ಯಾಯಾಲಯ FIR ದಾಖಲಿಸುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಮುಂದೂಡಿಕೆ ಮಾಡಿದೆ. 

  ತಿಲಕ್‌ನಗರ ಪೊಲೀಸರಿಗೆ FIR ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್‌ ಕುಮಾರ್‌ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು ದಾಖಲಿಸುವಂತೆ ಆದೇಶಿಸಿದೆ. 

  2019 ಏಪ್ರಿಲ್‌ ತಿಂಗಳಿನಿಂದ 2022ರ ಆಗಸ್ಟ್ ತಿಂಗಳವರೆಗೆ ಉದ್ಯಮಿ ಅನಿಲ್ ಅಗಲ್‌ವಾಲ್ ಅವರ ಸಂಸ್ಥೆಯಿಂದ ಸುಮಾರು 230 ಕೋಟಿ ರುಪಾಯಿ ಮತ್ತು ಅರೊಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರೂ.ನಷ್ಟು ಚುನಾವಣಾ ಬಾಂಡ್‌ ಗಳ ಮೂಲಕ ವಸೂಲಿ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

  ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಚುನಾವಣೆ ಬಾಂಡ್ ಮೂಲಕ ಸುಲಿಕೆ ಆರೋಪದಲ್ಲಿ ನಿರ್ಮಾಲ ಸೀತಾರಾಮನ್ ವಿರುದ್ಧ FIR ದಾಖಲು ಮಾಡಲು ಕೋರ್ಟ್ ಆದೇಶ ನೀಡಿದೆ. ಅವರು ರಾಜಿನಾಮೆ ಕೊಡ್ತಾರ? ಅವರು ಮೊದಲು ರಾಜಿನಾಮೆ ಕೊಡಲಿ ನಂತರ ಬಾಂಡ್ ದುರುಪಯೋಗ ಮಾಡಿಕೊಂಡಿರುವುದರಿಂದ ಪ್ರಧಾನಿ ಮೋದಿ ಸಹ ರಾಜಿನಾಮೆ ನೀಡಲಿ ಎಂದು ಹೇಳಿದ್ದಾರೆ.

Related Posts

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲ : ಗುಜರಾತ್ ಬಿಜೆಪಿ ಸರ್ಕಾರ 

ಆತ್ಮೀಯರೇ,  ಇದ್ದಕ್ಕಿದ್ದಂತೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅಪ್ಪಿಕೊಳ್ಳಲು ಹೊರಟಿರುವ ಸಂಘಿಗಳು ಏನೇ ನಾಟಕವಾಡಿದರೂ….  ಅವರ ಸಂವಿಧಾನ ದ್ವೇಷ ಮತ್ತು ಅಂಬೇಡ್ಕರ್ ದ್ವೇಷವನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ….   ಅದರ ಮತ್ತೊಂದು ಉದಾಹರಣೆ ಇಲ್ಲಿದೆ…   ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ…

Leave a Reply

Your email address will not be published. Required fields are marked *