ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.
ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರ ಸ್ವಾಮಿಯವರು ಭಾರಿ ಅಂತರದಿಂದ ಸೋತಿದ್ದಾರೆ, ಕಳೆದ ಎರಡೂ ಚುನಾವಣೆಗಳಲ್ಲಿ ಸೋತ ನಿಖಿಲ್ ಕುಮಾರ ಸ್ವಾಮಿಯವರು ಈ ಬಾರಿಯ ಉಪಚುನಾವಣೆಯಲ್ಲೂ ಕೂಡ ಸೋತಿರುವುದು ಅವರ ರಾಜಕೀಯ ಜೀವನದ ಅತ್ಯಂತ ದೊಡ್ಡ ಪಟ್ಟು ಎಂಬುದು ಜನರ ಅಭಿಪ್ರಾಯ. ಇನ್ನೊಂದು ಕಡೆ ನಿಖಿಲ್ ಕುಮಾರ ಸ್ವಾಮಿಯನ್ನು ಹ್ಯಾಟ್ರಿಕ್ ಹಿರೋ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆ ಪೋಸ್ಟ್ ಗಳು ವೈರಲ್ ಆಗಿತ್ತಿವೆ.