ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ರಸ್ತೆಯಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿಗಳು

ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.

ಉತ್ತರ ಪ್ರದೇಶದ ಬರೇಲಿ ಮತ್ತು ಬುಡೌನ್ ಜಿಲ್ಲೆಗಳ ನಡುವಿನ ಗಡಿಯಲ್ಲಿರುವ ಫರೀದ್‌ಪುರ ಮತ್ತು ದತಗಂಜ್‌ಗೆ ಸಂಪರ್ಕ ಕಲ್ಪಿಸುವ ರಾಮಗಂಗಾ ನದಿಯ ಮೇಲಿನ ಅಪೂರ್ಣ ಸೇತುವೆಯಿಂದ ಕಾರು ಉರುಳಿ ಬಿದ್ದ ಪರಿಣಾಮ ಮೂವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ನಿರ್ಮಾಣ ಹಂತದ ಸೇಲುವೆ ಮೇಲೆ‌ ಬ್ಯಾರಿಕೇಟ್ ಹಾಕದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂವರು ಹರ್ಯಾಣದ ಗುರುಗ್ರಾಮದಿಂದ ಕಾರಿನಲ್ಲಿ ಬರೇಲಿಗೆ ಹೊರಟಿದ್ದರು. ಇಬ್ಬರ ಮೃತದೇಹಗಳ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಖಾಲ್‌ಪುರ ಗ್ರಾಮದ ನಿವಾಸಿಗಳು ನದಿ ದಡಕ್ಕೆ ಭೇಟಿ ನೀಡಿದಾಗ ಕಾರು ಹಳ್ಳದಲ್ಲಿ ಮುಳುಗಿರುವುದು ಬೆಳಕಿಗೆ ಬಂದಿದೆ. ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಒಳಗೆ ಮೂವರು ಪ್ರಯಾಣಿಕರ ಶವಗಳನ್ನು ಕಂಡಿದ್ದಾರೆ. ಈ ದೃಶ್ಯ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಹೊರತೆಗೆದು ತನಿಖೆ ಆರಂಭಿಸಿದ್ದಾರೆ. ಸಂತ್ರಸ್ತರು ದತಗಂಜ್‌ನಿಂದ ಖಲ್‌ಪುರ್ ಮೂಲಕ ಫರೀದ್‌ಪುರಕ್ಕೆ ಪ್ರಯಾಣಿಸಲು ಗೂಗಲ್ ಮ್ಯಾಪ್ ಬಳಸಿದ್ದರು. ಅಪೂರ್ಣ ಸೇತುವೆಯ ಬಗ್ಗೆ ತಿಳಿದಿಲ್ಲದ ಕಾರಣ ಮತ್ತು ಕಾರಿನ ಹೆಚ್ಚಿನ ವೇಗದ ಕಾರಣ, ಚಾಲಕನಿಗೆ ಕಾರು ನಿಲ್ಲಿಸಲು ಸಾಧ್ಯವಾಗಿಲ್ಲ.ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತದೇಹಗಳನ್ನು ದೋಣಿಗಳನ್ನು ಬಳಸಿ ಫರೀದ್‌ಪುರಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರನ್ನು ಮೈನ್‌ಪುರಿಯ ಕೌಶಲ್ ಕುಮಾರ್, ಫರೂಕಾಬಾದ್‌ನ ವಿವೇಕ್ ಕುಮಾರ್ ಮತ್ತು ಅಮಿತ್ ಕುಮಾರ್ ಎಂದು ಗುರುತಿಸಲಾಗಿದೆ. ಮೂವರೂ ಸೆಕ್ಯುರಿಟಿ ಗಾರ್ಡ್‌ಗಳಾಗಿ ಕೆಲಸ ಮಾಡುತ್ತಿದ್ದರು ಮತ್ತು ಮದುವೆಗೆ ಹೊರಟಿದ್ದರು.

2022ರ ಪ್ರವಾಹದ ಸಂದರ್ಭದಲ್ಲಿ ಸೇತುವೆಯ ಅರ್ಧ ಭಾಗ ಕೊಚ್ಚಿ ಹೋಗಿತ್ತು. ಹಾಗಾಗಿ ಹೊಸ ಸೇತುವೆ ಕಾಮಗಾರಿ ನಡೆಯುತ್ತಿತ್ತು. ಸೇತುವೆಗಾಗಿ ನಿರ್ಮಿಸಲಾದ 24 ಪಿಲ್ಲರ್‌ಗಳಲ್ಲಿ 21 ಫರೀದ್‌ಪುರದಲ್ಲಿವೆ ಮತ್ತು ಮೂರು ಬುಡೌನ್‌ನ ದತಗಂಜ್ ಪ್ರದೇಶದಲ್ಲಿವೆ. ಸೇತುವೆಯ ಹಾನಿಗೊಳಗಾದ ಭಾಗವನ್ನು ಪ್ರಯಾಣಕ್ಕಾಗಿ ಮುಚ್ಚಲಾಗಿತ್ತು.

Related Posts

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲ : ಗುಜರಾತ್ ಬಿಜೆಪಿ ಸರ್ಕಾರ 

ಆತ್ಮೀಯರೇ,  ಇದ್ದಕ್ಕಿದ್ದಂತೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅಪ್ಪಿಕೊಳ್ಳಲು ಹೊರಟಿರುವ ಸಂಘಿಗಳು ಏನೇ ನಾಟಕವಾಡಿದರೂ….  ಅವರ ಸಂವಿಧಾನ ದ್ವೇಷ ಮತ್ತು ಅಂಬೇಡ್ಕರ್ ದ್ವೇಷವನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ….   ಅದರ ಮತ್ತೊಂದು ಉದಾಹರಣೆ ಇಲ್ಲಿದೆ…   ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ…

Leave a Reply

Your email address will not be published. Required fields are marked *